ಜಿಟಿಟಿಸಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 12: ಉಡುಪಿ ಕೊಳಲಗಿರಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಸಕ್ತ ಸಾಲಿಗೆ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ಕೋರ್ಸ್ಗಳ ಪ್ರವೇಶಕ್ಕೆ ಎಸೆಸೆಲ್ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ ಹಾಗೂ ದ್ವಿತೀಯ ಪಿಯುಸಿ (ವಿಜ್ಞಾನ ವಿಭಾಗ) ಪಾಸಾದ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷಕ್ಕೆ ಪ್ರವೇಶ ಪಡೆಯಲು ಸಹ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಡುಪಿ ಮೊಬೈಲ್ ಸಂಖ್ಯೆ: 9880510585 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story