ಮಂಗಳೂರು: ಸಂಶಯದ ಮೇಲೆ ಮೂವರ ಬಂಧನ

ಮಂಗಳೂರು, ಮೇ 12: ನಗರದ ಕದ್ರಿಯ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಆರೋಪದಲ್ಲಿ ಮೂವರು ಯುವಕರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಸಮೀಪದ ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್ (19), ಉಮ್ಮರ್ ಫಾರೂಕ್ (21) ಮುಹಮ್ಮದ್ ಜಾಫರ್ (18) ಬಂಧಿತ ಆರೋಪಿಗಳು.
ಗುರುವಾರ ರಾತ್ರಿ ಸುಮಾರು 10ಕ್ಕೆ ದೇವಸ್ಥಾನದ ಅಂಗಣಕ್ಕೆ ಬೈಕ್‌ನಲ್ಲಿ ಅಕ್ರಮವಾಗಿ ಪ್ರವೇಶಿಸಿ ಸುತ್ತಾಡುತ್ತಿದ್ದವರನ್ನು ಕಂಡು ಸಂಶಯಗೊಂಡ ದೇವಾಲಯದ ಸಿಬ್ಬಂದಿಯು ವಿಚಾರಿಸಿದಾಗ ಸಮರ್ಪಕವಾದ ಉತ್ತರವನ್ನು ನೀಡಲಿಲ್ಲ ಎನ್ನಲಾಗಿದೆ.
ಅಲ್ಲದೆ ಭದ್ರತಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಬೆದರಿಕೆ ಹಾಕಿರುವ ಬಗ್ಗೆ ದೇವಾಲಯದ ವ್ಯವಸ್ಥಾಪನ ಸಮಿತಿಯವರು ನೀಡಿದ ದೂರಿನಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.
Next Story