Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಚುನಾವಣಾ ಮತ ಎಣಿಕೆ ವಾಹನ...

ಮಂಗಳೂರು: ಚುನಾವಣಾ ಮತ ಎಣಿಕೆ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ

12 May 2023 9:32 PM IST
share
ಮಂಗಳೂರು: ಚುನಾವಣಾ ಮತ ಎಣಿಕೆ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ

ಮಂಗಳೂರು, ಮೇ 12: ದ.ಕ.ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್ ಸಮೀಪದ ಎನ್‌ಐಟಿಕೆ ಆವರಣದಲ್ಲಿ ನಡೆಯಲಿದೆ. ಈ ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಯ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಮಂಗಳೂರು ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ಎನ್.ಐ.ಟಿ.ಕೆ ಜಂಕ್ಷನ್ ಬಳಿಯಲ್ಲಿ ಎಡಕ್ಕೆ ತಿರುಗಿ ಎನ್.ಐ.ಟಿ.ಕೆ ಕ್ಯಾಂಪಸ್‌ನ ಅಂಡರ್‌ ಪಾಸ್ ಮುಖಾಂತರ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿರುವ ಎನ್.ಐ.ಟಿ.ಕೆ. ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡುವುದು.

ಅದೇ ರೀತಿ ದ್ವಿ-ಚಕ್ರ  ವಾಹನಗಳನ್ನು ಎನ್.ಐ.ಟಿ.ಕೆ. ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಮೈದಾನದಲ್ಲಿ ನಿಲುಗಡೆ ಮಾಡುವುದು ಅಥವಾ ಸುರತ್ಕಲ್ ಸುಪ್ರೀಂ ಮಹಲ್ ಸಮುದಾಯ ಭವನದ ಬಳಿ ರಾಷ್ಟ್ರೀಯ ಹೆದ್ದಾರಿಯಿಂದ ಎಡಬದಿಯ ತಡಂಬೈಲ್ ಸದಾಶಿವ ಮಹಾ ಗಣಪತಿ ದೇವಸ್ಥಾನ ರಸ್ತೆಯಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವುದು.

ಮುಲ್ಕಿ ಕಡೆಯಿಂದ ಮತ ಎಣಿಕೆ ಕೇಂದ್ರಕ್ಕೆ ಬರುವ ಸಾರ್ವಜನಿಕರು ಎನ್.ಐ.ಟಿ.ಕೆ. ಜಂಕ್ಷನ್ ಬಳಿಯಲ್ಲಿ ಬಲಕ್ಕೆ ತಿರುಗಿ ಎನ್.ಐ.ಟಿ.ಕೆ. ಕ್ಯಾಂಪಸ್‌ನ ಆಂಡರ್‌ಪಾಸ್ ಮುಖಾಂತರ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿರುವ ಎನ್.ಐ.ಟಿ.ಕೆ. ವಸತಿಗೃಹದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡುವುದು. ದ್ವಿ-ಚಕ್ರ ವಾಹನಗಳನ್ನು ಎನ್.ಐ.ಟಿ.ಕೆ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಮೈದಾನದಲ್ಲಿ ನಿಲುಗಡೆ ಮಾಡುವುದು. ಅಥವಾ ರಾಷ್ಟ್ರೀಯ ಹೆದ್ದಾರಿಯ ಸುಪ್ರಿಂ ಮಹಲ್ ಸಮುದಾಯ ಭವನ ಬಳಿ ಯು-ಟರ್ನ್ ಮಾಡಿ ಎಡಬದಿಯ ತಡಂಬೈಲ್ ಸದಾಶಿವ ಮಹಾ ಗಣಪತಿ ದೇವಸ್ಥಾನ ರಸ್ತೆಯಲ್ಲಿ ಸಾಗಿ ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವುದು.

ಮತ ಎಣಿಕೆ ಕರ್ತವ್ಯಕ್ಕೆ ಬರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಎನ್.ಐ.ಟಿ.ಕೆ. ಯ ಮುಖ್ಯ ದ್ವಾರದ ಮೂಲಕ ಒಳ ಪ್ರವೇಶಿಸಿ ಎನ್.ಐ.ಟಿ.ಕೆ ಫುಟ್‌ಬಾಲ್ ಮೈದಾನದಲ್ಲಿ ವಾಹನಗಳನ್ನು ನಿಲುಗಡೆ ಮಾಡುವುದು.

ವಾಹನ ನಿಲುಗಡೆ ನಿಷೇದಿತ ಸ್ಥಳಗಳು

ರಾಷ್ಟ್ರೀಯ ಹೆದ್ದಾರಿ-65 ರ ಎನ್.ಐ.ಟಿ.ಕೆ ಸಮೀಪದ ಸುಪ್ರೀಂ ಮಹಲ್ ಸಮುದಾಯ ಭವನದಿಂದ ಟೋಲ್ ಗೇಟ್‌ವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಸರ್ವಿಸ್ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಗಿಯುವವರೆಗೆ ಸಂಪೂರ್ಣ ನಿಷೇಧಿಸಲಾಗಿದೆ.

ವಿಶೇಷ ಸೂಚನೆ: ಮತ ಎಣಿಕೆ ಕೇಂದ್ರಕ್ಕೆ ಸಾಕಷ್ಟು ಸಾರ್ವಜನಿಕರು ಆಗಮಿಸುವ ಕಾರಣದಿಂದಾಗಿ ಎನ್.ಐ.ಟಿ.ಕೆ.ಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಗಳಿದ್ದು, ಉಡುಪಿ ಹಾಗೂ ಮಂಗಳೂರು ಕಡೆಗಳಿಗೆ ಸಂಚರಿಸುವ ಸಾರ್ವಜನಿಕರು ಪರ್ಯಾಯ ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.

share
Next Story
X