Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ನೂರ್ ಸಮದ್ ಅಬ್ಬಲಗೆರೆಗೆ ‘ಮುಸ್ಲಿಮ್...

ಡಾ.ನೂರ್ ಸಮದ್ ಅಬ್ಬಲಗೆರೆಗೆ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

12 May 2023 9:43 PM IST
share
ಡಾ.ನೂರ್ ಸಮದ್ ಅಬ್ಬಲಗೆರೆಗೆ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

ಮಂಗಳೂರು: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡುವ ರಾಜ್ಯಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ‘ವಿಸ್ಮಯ ಕೀಟ ಪ್ರಪಂಚ’ ಕೃತಿಯ ಲೇಖಕ ಡಾ. ನೂರ್ ಸಮದ್ ಅಬ್ಬಲಗೆರೆ ಅವರಿಗೆ ಶುಕ್ರವಾರ ನಗರದ ಕಂಕನಾಡಿ ಮಸೀದಿ ಬಳಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ  ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನಗೈದು ಮಾತನಾಡಿದ ಶಾಸಕ ಯು.ಟಿ.ಖಾದರ್ ‘ಸಾಹಿತ್ಯ ಕೃತಿಗಳ ರಚನೆ ಮತ್ತು ಓದುವುದ ರಿಂದ ಸಕಾರಾತ್ಮಕ ಭಾವನೆ ಮೂಡಲಿದೆ. ಸಾಹಿತಿ ಹಾಗೂ ಸಾಹಿತ್ಯದಿಂದ ಸಮಾಜ ಮತ್ತು ಮನಸ್ಸುಗಳನ್ನು ಜೋಡಿಸುವ ಕೆಲಸವೂ ಆಗುತ್ತಿರುವುದು ಗಮನಾರ್ಹ. ಭವಿಷ್ಯದ ಹಿತದೃಷ್ಟಿಯಿಂದ ಮುಸ್ಲಿಂ ಸಮುದಾಯದಲ್ಲಿ ಸಾಹಿತಿ, ಲೇಖಕರು ಅಧಿಕ ಸಂಖ್ಯೆಯಲ್ಲಿದ್ದರೂ ಕೂಡ ಮತ್ತಷ್ಟು ಸಾಹಿತಿಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಅಗತ್ಯವಿದೆ’ ಎಂದರು.

ಪ್ರಶಸ್ತಿ ಸ್ವೀಕರಿಸಿದ ಮಾತನಾಡಿದ ಡಾ. ನೂರ್ ಸಮದ್ ಅಬ್ಬಲಗೆರೆ ‘ಬದ್ಧತೆ, ನಿಷ್ಠೆ, ಶ್ರದ್ಧೆಯಿಂದ ಯಾವುದೇ ಕೆಲಸ ಕೈಗೆತ್ತಿಕೊಂಡರೆ ಮನ್ನಣೆ ಸಿಗಲಿದೆ ಎಂಬುದಕ್ಕೆ ‘ವಿಸ್ಮಯ ಕೀಟ ಪ್ರಪಂಚ’ ಕೃತಿಗೆ ಲಭಿಸಿದ ಈ ಪ್ರಶಸ್ತಿಯು ಸಾಕ್ಷಿಯಾಗಿದೆ’ ಎಂದರು.

ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಿದ್ದರು. ಮುಹಮ್ಮದ್ ಸಲೀಂ ಬೋಳಂಗಡಿ ಸ್ತುತಿಗೀತೆ ಹಾಡಿದರು. ಸಂಘದ ಜೊತೆ ಕಾರ್ಯದರ್ಶಿ ಎ.ಕೆ.ಕುಕ್ಕಿಲ ಸ್ವಾಗತಿಸಿದರು. ಉಪಾಧ್ಯಕ್ಷ ಆಲಿಕುಂಞಿ ಪಾರೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿದರು.

ಬಹುಭಾಷಾ ಕವಿಗೋಷ್ಠಿಯಲ್ಲಿ ಕವಿಗಳಾದ ಮುಹಮ್ಮದ್ ಬಡ್ಡೂರು, ರಾಜಾರಾಮ ವರ್ಮ ವಿಟ್ಲ, ಡಾ. ಅರುಣ್ ಉಳ್ಳಾಲ, ತನ್ಸೀರಾ ಆತೂರ್ ಕವನ ವಾಚಿಸಿದರು.

ಕಾರ್ಯಕ್ರಮದಲ್ಲಿ ‘ಸೌಹಾರ್ದ ಪರಂಪರೆ: ಅಂದು-ಇಂದು-ಮುಂದು’ ಎಂಬ ವಿಷಯದಲ್ಲಿ ಪ್ರಧಾನ ಭಾಷಣಗೈದ ವ್ಯಂಗ್ಯ ಚಿತ್ರಗಾರ ದಿನೇಶ್ ಕುಕ್ಕುಜಡ್ಕ ‘ಸೌಹಾರ್ದಕ್ಕೆ ಒತ್ತು ನೀಡಿರುವ ಅನೇಕ ಪ್ರಸಂಗಗಳನ್ನು ಇತಿಹಾಸದ ಪುಟಗಳಿಂದ ತಿಳಿಯಬಹುದಾಗಿದೆ. ಅದು ಈಗಲೂ ಮುಂದುವರಿದಿದೆ. ಎಲ್ಲೋ ಒಂದುಕಡೆ ಯಾರೋ ಕೆಲವರ ಕುಹಕದಿಂದ ಅಹಿತಕರ ಘಟನೆ ನಡೆದಾಗ ಸೌಹಾರ್ದ ನಾಶವಾಗಿದೆ, ಸಾಮರಸ್ಯಕ್ಕೆ ಹೊಡೆತ ಬಿದ್ದಿವೆ ಎಂದು ಭಾವಿಸಬೇಕಿಲ್ಲ. ಸಮಾಜದಲ್ಲಿ ಸೌಹಾರ್ದ ಬಯಸುವ ಕೋಟ್ಯಂತರ ಜನರು ಇದ್ದಾರೆ ಎಂಬ ಸಕಾರಾತ್ಮಕ ಭಾವನೆಯಿಂದಿರಬೇಕಿದೆ’ ಎಂದರು.

ಅನಾಹುತಗಳು ಸಂಭವಿಸಿದಾಗ, ದುರ್ಘಟನೆಗಳು ನಡೆದಾಗ ಯುವಕರು ಜಾತಿ, ಮತ, ಧರ್ಮಗಳನ್ನು ನೋಡದೆ ನೆರವಿಗೆ ಧಾವಿಸುವುದನ್ನು ಎಲ್ಲಾ ಕಡೆಯೂ ಕಾಣಬಹುದು. ಇದು ಹೃದಯಗಳನ್ನು ಬೆಸೆಯುವ ಅತ್ಯುತ್ತಮ ಪ್ರಕ್ರಿಯೆಯಾಗಿದೆ. ಆದರೆ ಈ ಪ್ರಕ್ರಿಯೆಗೆ ದುರಂತಗಳು ಅಥವಾ ಅವಘಡಗಳೇ ನಡೆಯಬೇಕಾ? ಅವಘಡಗಳ ಹೊರತಾಗಿಯೂ ಸದಾ ಪರಸ್ಪರ ಬೆರೆತು ಸೌಹಾರ್ದದಿಂದಿರಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದ ದಿನೇಶ್ ಕುಕ್ಕುಜಡ್ಕ ‘ರಾಜಕಾರಣ, ಅಧಿಕಾರ, ಹಣ ಬಲ ಇತ್ಯಾದಿಗಳು ಸೌಹಾರ್ದಕ್ಕೆ ಅಡ್ಡಿಯಾಗುತ್ತದೆ ಎಂಬ ವಾಸ್ತವನನ್ನು ನಾವೆಲ್ಲ ಅರಿತುಕೊಳ್ಳಬೇಕಿದೆ ಎಂದರು.

ಜಿಲ್ಲೆಯ ಕೆಲವು ಕಡೆಯ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಗುಲ್ಲೆಬ್ಬಿಸುವ ಬ್ಯಾನರ್ ಹಾಕಲಾಯಿತು. ಆದರೆ ಇದರಿಂದ ಯಾರೂ ನಿರಾಶರಾಗಬೇಕಿಲ್ಲ. ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ಬ್ಯಾನರ್‌ಗೆ ಕಟ್ಟಿದ ನೂಲು ತುಂಡಾದೀತೇ ವಿನಃ ಸೌಹಾರ್ದ ಎಂದೂ ಹಾಳಾಗದು. ದೇಶದ ಹಲವೆಡೆಯ ಜನಾಂಗೀಯ ದ್ವೇಷದ ಮಧ್ಯೆಯೂ ಸೌಹಾರ್ದದ ವಾತಾವರಣವನ್ನು ಕಾಣ ಬಹುದಾಗಿದೆ ಎಂದು ದಿನೇಶ್ ಕುಕ್ಕುಜಡ್ಕ ಹೇಳಿದರು.

share
Next Story
X