ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ನ ಇನಾಯತ್ ಅಲಿಗೆ ಮುನ್ನಡೆ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಮುನ್ನಡೆ ಸಾಧಿಸಿಕೊಂಡಿದ್ದಾರೆ.
ಇಲ್ಲಿ 2ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಇನಾಯತ್ ಅಲಿ ಅವರು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿಗಿಂತ 1099 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನಾಯತ್ ಅಲಿ 10371 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಭರತ್ ಶೆಟ್ಟಿ 9272 ಮತಗಳನ್ನು ಪಡೆದಿದ್ದಾರೆ.
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 3,996, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 2,962, ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 2,392 ಮತಗಳನ್ನು ಪಡೆದಿದ್ದಾರೆ. ದ್ವಿತೀಯ ಸುತ್ತಿನಲ್ಲಿ ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ 8666, ಪಕ್ಷೇತರ ಅರುಣ್ ಕುಮಾರ್ ಪುತ್ತಿಲ 6495, ಬಿಜೆಪಿಯ ಆಶಾ ತಿಮ್ಮಪ್ಪ ಗೌಡ 4513 ಮತಗಳನ್ನು ಪಡೆದಿದ್ದಾರೆ.
Next Story