ಮತ ಎಣಿಕೆ: ಮುನ್ನಡೆಯಲ್ಲಿ ಮ್ಯಾಜಿಕ್ ಸಂಖ್ಯೆ ದಾಟಿದ ಕಾಂಗ್ರೆಸ್

ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ ದಾಟಿದೆ.
ಕಾಂಗ್ರೆಸ್ 115, ಬಿಜೆಪಿ 77, ಜೆಡಿಎಸ್ 26 ಹಾಗೂ ಇತರರು 6ರಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು 36,404 ಮತ ಪಡೆದು ಮುನ್ನಡೆಯಲ್ಲಿದ್ದರೆ, ಚಾಮರಾಜಪೇಟೆಯಲ್ಲಿ ಕಾಂಗ್ರೆಸ್‌ನ ಝಮೀರ್ ಅಹ್ಮದ್ 20 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ವರುಣಾದಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ- 6576, ಕನಕಪುರದಲ್ಲಿ ಡಿ.ಕೆ ಶಿವಕುಮಾರ್, ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, ಚಿಕ್ಕಬಳ್ಳಾಪುರದಲ್ಲಿ ಪ್ರದೀಪ್ ಈಶ್ವರ್ ಸೇರಿದಂತೆ ಹಲವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
Next Story





