ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆ, ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ಗೆ ಮುನ್ನಡೆ

ರಾಮನಗರ: ಜೆಡಿಎಸ್ ಭದ್ರಕೋಟೆ ಎಂದೇ ಕರೆಯಲ್ಪಡುವ ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹಿನ್ನಡೆಯಲ್ಲಿದ್ದಾರೆ.
ಇಲ್ಲಿ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ 14,781 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸೊಸೆ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಗೆದ್ದು ಶಾಸಕರಾಗಿದ್ದರು. ಈ ಬಾರಿ ನಿಖಿಲ್ ಕುಮಾರ ಸ್ವಾಮಿ ಸ್ಪರ್ಧಿಸುತ್ತಿದ್ದಾರೆ.
Next Story