ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿ ತೆರೆದಿದೆ: ರಾಹುಲ್ ಗಾಂಧಿ
ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತವನ್ನು ರಚಿಸುವತ್ತ ಮುಂದಡಿಯಿಟ್ಟಿದ್ದು, ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ. "ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿ ತೆರೆದಿದೆ" ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಚುನಾವಣೆಯಲ್ಲಿ ಬಡವರ ಶಕ್ತಿ ಗೆದ್ದಿದೆ ಎಂದು ಅವರು ಹೇಳಿದರು. "ಇತರ ರಾಜ್ಯಗಳಲ್ಲಿಯೂ ಇದು ಪುನರಾವರ್ತನೆಯಾಗುತ್ತದೆ. ಕಾಂಗ್ರೆಸ್ ಬಡವರ ಸಮಸ್ಯೆಗಳಿಗಾಗಿ ಹೋರಾಡಿದೆ" ಎಂದು ಅವರು ಹೇಳಿದರು. ಪಕ್ಷವು ತನ್ನ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ನೀಡಿದ ಐದು ಭರವಸೆಗಳನ್ನು ಈಡೇರಿಸಲಿದೆ ಎಂದು ಅವರು ಹೇಳಿದರು.
मैं कर्नाटक की जनता, कर्नाटक में कांग्रेस पार्टी के कार्यकर्ताओं और पार्टी के सब नेताओं को बधाई देता हूं। कर्नाटक के चुनाव में एक तरफ क्रोनी कैपिटलिस्ट की ताकत थी, दूसरी तरफ जनता की ताकत थी और जनता ने इन्हें हरा दिया।
— Congress (@INCIndia) May 13, 2023
हमने प्यार और मोहब्बत से यह लड़ाई लड़ी। कर्नाटक की जनता… pic.twitter.com/pYbhxlKrsc