ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ ಜಯ

ಬೆಳ್ತಂಗಡಿ, ಮೇ 13: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಸತತ ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ.
ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ರಕ್ಷಿತ್ ಶಿವರಾಂ ಅವರನ್ನು 18,640 ಮತಗಳ ಅಂತರದಿಂದ ಸೋಲಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಹರೀಶ್ ಪೂಂಜಾ ಕಾಂಗ್ರೆಸ್ಸಿನ ಹಿರಿಯ ಮುಖಂಡ ಕೆ.ವಸಂತ ಬಂಗೇರರನ್ನು 22 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದರು. ಇದೀಗ ಮತ್ತೊಮ್ಮೆ ಅವರು ಶಾಸಕರಾಗಿದ್ದಾರೆ.
ಪ್ರತಿ ಸುತ್ತಿನ ಮತ ಎಣಿಕೆಯಲ್ಲೂ ಮೇಲುಗೈ ಸಾಧಿಸಿದ್ದ ಹರೀಶ್ ಪೂಂಜಾ ಅಂತಿಮವಾಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಮುತ್ತಣ್ಣ ಪೂಂಜಾ ಹಾಗೂ ನಳಿನಿ ದಂಪತಿಯ ಪುತ್ರನಾಗಿರುವ ಹರೀಶ್ ಪೂಂಜಾ ಬಿಎಲ್.ಎಲ್.ಬಿ ಪದವೀಧರ.
Next Story