ರಾಜಕೀಯ ನಿವೃತ್ತಿ ಘೋಷಣೆಗೆ ಚಿಂತನೆ: ವಿನಯ ಕುಮಾರ್ ಸೊರಕೆ

ಉಡುಪಿ: ರಾಜಕೀಯ ನಿವೃತ್ತಿ ಘೋಷಣೆ ಮಾಡುವ ಬಗ್ಗೆ ಆಲೋಚನೆ ಮಾಡುತ್ತಿದ್ದೇನೆ ಎಂದು ಸೋಲು ಕಂಡ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.
ಮತ ಎಣಿಕಾ ಕೇಂದ್ರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸೋಲು ಅಭಿವೃದ್ಧಿಗೆ ಆಗಿರುವ ಸೋಲು. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಹಿಡಿತ ಸಾಧಿಸಿದೆ. ಅಂಚೆ ಮತದಾನದಲ್ಲಿ ನನಗೆ ಬಹಳ ಹಿನ್ನಡೆ ಯಾಗಿತ್ತು. ರಾಜ್ಯದಲ್ಲೇ ನಮ್ಮದೆ ಸರಕಾರ ಇರುವುದರಿಂದ ಗ್ಯಾರಂಟಿ ಕಾರ್ಡ್ ಜನರಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ ಎಂದರು.
Next Story