Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೆಟ್ಟರ್ ಗೆ ಸೋಲು, ಸವದಿಗೆ ಗೆಲುವು;...

ಶೆಟ್ಟರ್ ಗೆ ಸೋಲು, ಸವದಿಗೆ ಗೆಲುವು; ರಾಷ್ಟ್ರದ ಗಮನ ಸೆಳೆದ ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶದ ವಿವರ ಇಲ್ಲಿದೆ...

13 May 2023 7:04 PM IST
share
ಶೆಟ್ಟರ್ ಗೆ ಸೋಲು, ಸವದಿಗೆ ಗೆಲುವು; ರಾಷ್ಟ್ರದ ಗಮನ ಸೆಳೆದ ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶದ ವಿವರ ಇಲ್ಲಿದೆ...

ಬೆಂಗಳೂರು, ಮೇ 13: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸೋಲು ಕಂಡಿದ್ದರೆ, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಿದ್ದು, ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 1.24ಲಕ್ಷಕ್ಕೂ ಅಧಿಕ ಮತಗಳ ಬಾರೀ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆಂದು ಹೇಳಲಾಗಿದ್ದ ಕೋಲಾರ ಕ್ಷೇತ್ರದಿಂದ ಕೊನೆಯ ಕ್ಷಣದಲ್ಲಿ ಕಣಕ್ಕಿಳಿದ್ದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಿದ್ದ ಕೊತ್ತನೂರು ಜಿ. ಮಂಜುನಾಥ್ ಗೆಲುವು ಸಾಧಿಸಿದ್ದರೆ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್‍ನ ಸ್ವರೂಪ್ ಪ್ರಕಾಶ್, ಬಿಜೆಪಿಯ ಹಾಲಿ ಶಾಸಕ ಪ್ರೀತಂ ಗೌಡ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿದ್ದ ದರ್ಶನ್ ಧ್ರುವನಾರಾಯಣ ಗೆಲುವು ಕಂಡಿದ್ದು, ಮೇಲುಕೋಟೆ ಕ್ಷೇತ್ರದಿಂದ ‘ಸರ್ವೋದಯ ಕರ್ನಾಟಕ ಪಕ್ಷ’ದಿಂದ ಕಣಕ್ಕಿಳಿದಿದ್ದ ದರ್ಶನ್ ಪುಟ್ಟಣ್ಣಯ್ಯ ಗೆಲುವು ದಾಖಲಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ವಿರುದ್ಧ 32,070 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಶೆಟ್ಟರ್-38,965 ಮತಗಳನ್ನು ಗಳಿಸಿದ್ದರೆ, ಟೆಂಗಿನಕಾಯಿ-71,035 ಮತಗಳನ್ನು ಪಡೆದಿದ್ದಾರೆ.

ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ-1,31,404 ಮತಗಳನ್ನು ಗಳಿಸಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಮಹೇಶ್ ಕುಮಟಳ್ಳಿ-55,282 ಮತಗಳನ್ನು ಪಡೆದಿದ್ದು, 76,122 ಮತಗಳ ಬಾರಿ ಅಂತರದಿಂದ ಸವದಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್‍ನ ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಟ್ಟು 1,06590 ಮತಗಳನ್ನು ಗಳಿಸಿದ್ದು, ಬಿಜೆಪಿಯ ನಾಗೇಶ್ ಮನೋಲ್‍ಕರ್ 51,039 ಮತಗಳನ್ನು ಪಡೆದಿದ್ದು, ಹೆಬ್ಬಾಳ್ಕರ್-55,551 ಮತಗಳ ಬಾರಿ ಅಂತರದಿಂದ ಗೆಲುವು ಕಂಡಿದ್ದಾರೆ.

ಕಲಬುರ್ಗಿಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ 81,323 ಮತಗಳನ್ನು ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್-67,683 ಮತಗಳನ್ನು ಪಡೆದಿದ್ದು 13,640 ಮತಗಳ ಅಂತರದಿಂದ ಪ್ರಿಯಾಂಕ್ ಖರ್ಗೆ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ವಿಧಾನಸಭೆ ಪ್ರವೇಶ ಮಾಡಿದ್ದಾರೆ.

ತೀವ್ರ ಕುತೂಹಲ ಸೃಷ್ಟಿಸಿದ್ದ ವರುಣ ಕ್ಷೇತ್ರದಿಂದ ಕಣಕ್ಕಿಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 1,19,430 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಸಚಿವ ವಿ.ಸೋಮಣ್ಣ-73,424 ಮತಗಳನ್ನು ಪಡೆದಿದ್ದರೆ, ಸಿದ್ದರಾಮಯ್ಯ 46,006 ಮತಗಳ ಭರ್ಜರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಸೋಲು ಕಂಡಿದ್ದಾರೆ. ಇಕ್ಬಾಲ್ ಹುಸೇನ್-87,690 ಮತಗಳನ್ನು ಗಳಿಸಿದ್ದರೆ, ನಿಖಿಲ್-76,975 ಮತಗಳನ್ನು ಪಡೆದಿದ್ದು, 10,715 ಮತಗಳ ಅಂತರದಿಂದ ಇಕ್ಬಾಲ್ ಹುಸೇನ್ ಗೆಲುವು ದಾಖಲು ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅಭ್ಯರ್ಥಿ ಪ್ರದೀಪ್ ಈಶ್ವರ್ 86,224 ಮತ ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ 75,582 ಮತ ಗಳಿಸಿದ್ದು, 10,642 ಮತಗಳ ಅಂತರದಿಂದ ಈಶ್ವರ್ ಗೆಲುವು ಸಾಧಿಸಿದ್ದಾರೆ. ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕಡಾಡಿ ವಿರುದ್ಧ 25,412 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್, ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಹರ್ಷವರ್ಧನ್ ವಿರುದ್ಧ 47,607 ಮತಗಳ ಬಾರಿ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಇನ್ನೂ ಮೇಲುಕೋಟೆ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ, ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ 10,862 ಮತಗಳ ಅಂತರದಿಂದ ಗೆಲುವು ದಾಖಲು ಮಾಡಿದ್ದಾರೆ. ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕ ಪ್ರೀತಂಗೌಡ ವಿರುದ್ಧ ಜೆಡಿಎಸ್‍ನ ಸ್ವರೂಪ್ ಪ್ರಕಾಶ್ 7,854 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

share
Next Story
X