ಬಿಜೆಪಿ ಸೋಲಿನ ಹೊಣೆ ನಾನೇ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು, ಮೇ 13: ‘ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸುತ್ತಾ, ರಾಜ್ಯದ ಜನತೆಯ ತೀರ್ಪನ್ನು ಸ್ವಾಗತಿಸುತ್ತೇನೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅಭಿವೃದ್ಧಿಯ ಕೆಲಸ ಮಾಡಿದ್ದು, ಅಂತಿಮವಾಗಿ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.
ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದ್ದಾರೆ. ಬೊಮ್ಮಾಯಿ ನೇತೃತ್ವದ ನಮ್ಮ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ. ಕಾಂಗ್ರೆಸ್‍ಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ರಾಜ್ಯದ ಅನೇಕ ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸೋತಿರುವ ಕಡೆಗಳಲ್ಲಿ ಪರಾಮರ್ಶೆ ಮಾಡಿಕೊಂಡು ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತೇವೆ’ ಎಂದು ಹೇಳಿದರು.
Next Story





