Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆ ಫಲಿತಾಂಶ; ಒಂದು ಡಜನ್ ಸಚಿವರ...

ಚುನಾವಣೆ ಫಲಿತಾಂಶ; ಒಂದು ಡಜನ್ ಸಚಿವರ ಸೋಲು, ಸಿಎಂಗೆ ಭಾರೀ ಮುಖಭಂಗ..!

13 May 2023 7:46 PM IST
share
ಚುನಾವಣೆ ಫಲಿತಾಂಶ; ಒಂದು ಡಜನ್ ಸಚಿವರ ಸೋಲು, ಸಿಎಂಗೆ ಭಾರೀ ಮುಖಭಂಗ..!

ಬೆಂಗಳೂರು, ಮೇ 13: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದ 12 ಸಚಿವರು ಸೋಲಿನ ರುಚಿ ನೋಡಿದ್ದು,  ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.

ಬಸವರಾಜ ಬೊಮ್ಮಾಯಿ ಸರಕಾರದ ಪ್ರಭಾವಿ ಸಚಿವರಾಗಿದ್ದ ಗೋವಿಂದ ಎಂ.ಕಾರಜೋಳ, ಡಾ.ಕೆ.ಸುಧಾಕರ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಮುರುಗೇಶ್ ಆರ್.ನಿರಾಣಿ ಮತ್ತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಪ್ರಮುಖರು ಸೋಲನುಭವಿಸಿದ್ದಾರೆ.

-ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಲ್ಲಿನ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ಸಿನ ಪ್ರದೀಪ್ ಈಶ್ವರ್ ವಿರುದ್ಧ ಬರೋಬ್ಬರಿ 10,642 ಮತಗಳಿಂದ ಸೋಲು ಕಂಡಿದ್ದಾರೆ. ಪ್ರದೀಪ್ ಈಶ್ವರ್ ಒಟ್ಟು 86,224 ಮತ ಪಡೆದರೆ, ಸುಧಾಕರ್ 75,582 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ, ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ ಅವರು 19,815 ಮತಗಳನ್ನು ಪಡೆದಿದ್ದಾರೆ.

-ಕ್ರೀಡಾ ಮತ್ತು ರೇಶೆ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ವಿರುದ್ಧ ಬರೋಬ್ಬರಿ 42,495 ಮತಗಳ ಅಂತರದಿಂದ ಸೋತು, ಮೂರನೆ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಎಚ್.ಟಿ.ಮಂಜು ಒಟ್ಟು 80,646 ಮತ ಪಡೆದರೆ, ಕಾಂಗ್ರೆಸ್ಸಿನ ಬಿ.ಎಲ್.ದೇವರಾಜ್ 58,302 ಮತ ಪಡೆದಿದ್ದಾರೆ. ಸಚಿವ ನಾರಾಯಣಗೌಡ ಮೂರನೇ ಸ್ಥಾನದಲ್ಲಿದ್ದು, ಬರೀ 38,151 ಮತ ಪಡೆದುಕೊಂಡಿದ್ದಾರೆ.

-ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಅವರು ಹೊಸಕೋಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ 4,747 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಎಂಟಿಬಿ ನಾಗರಾಜು ಅವರು 1,02145 ಮತ ಪಡೆದರೆ, ಶರತ್ ಬಚ್ಚೇಗೌಡ 1,06932 ಮತ ಪಡೆದಿದ್ದಾರೆ.

-ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ಸಿನ ತಿಮ್ಮಪುರ ಆರ್.ಬಿ. ವಿರುದ್ಧ 17,335 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಗೋವಿಂದ ಕಾರಜೋಳ 59,963 ಮತ ಪಡೆದರೆ, ತಿಮ್ಮಪುರ ಆರ್.ಬಿ. 77,298 ಮತ ಪಡೆದಿದ್ದಾರೆ.

-ಕೃಷಿ ಸಚಿವ ಬಿ.ಸಿ.ಪಾಟೀಲ್ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ಸ್ ಅಭ್ಯರ್ಥಿ ಯು.ಬಿ. ಬಣಕಾರ್ ಅವರ ವಿರುದ್ಧ 15,020 ಮತಗಳ ಅಂತರದಿಂದ ಸೋತಿದ್ದಾರೆ. ಯು.ಬಿ.ಬಣಕಾರ್ 85,378 ಮತ ಪಡೆದರೆ, ಬಿ.ಸಿ.ಪಾಟೀಲ್ 70,358 ಮತ ಪಡೆದಿದ್ದಾರೆ.

-ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಅಭ್ಯರ್ಥಿಸಿ.ಬಿ.ಸುರೇಶ್ ಬಾಬು ವಿರುದ್ಧ 10,042 ಮತಗಳ ಅಂತರದಿಂದ ಸೋತಿದ್ದಾರೆ. ಮಾಧುಸ್ವಾಮಿ 60,994 ಮತ ಪಡೆದರೆ, ಸುರೇಶ್ ಬಾಬು 71,036 ಮತ ಪಡೆದಿದ್ದಾರೆ. ಇನ್ನೂ, ಮೂರನೆ ಸ್ಥಾನದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಕಿರಣ್ ಕುಮಾರ್ 50,996 ಮತಗಳನ್ನು ಪಡೆದುಕೊಂಡಿದ್ದಾರೆ.

-ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ತೀವ್ರ ವಿವಾದದಕ್ಕೆ ಗುರಿಯಾಗಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಷಡಕ್ಷರಿ ವಿರುದ್ಧ ಬರೋಬ್ಬರಿ 17,652 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಷಡಕ್ಷರಿ ಅವರು 71,999 ಮತ ಪಡೆದರೆ, ನಾಗೇಶ್ 54,347 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ಕೆ.ಟಿ. ಶಾಂತಕುಮಾರ್ 26,014 ಮತಗಳನ್ನು ಪಡೆದು ಮೂರನೆ ಸ್ಥಾನ ತಲುಪಿದ್ದಾರೆ.

-ವಸತಿ ಸಚಿವ ವಿ.ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಈ ಎರಡು ಕ್ಷೇತ್ರಗಳಲ್ಲಿಯೂ ಸೋಲು ಕಂಡಿದ್ದಾರೆ. ಪ್ರಮುಖವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಇಲ್ಲಿನ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರು 46,163 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಸಿದ್ದರಾಮಯ್ಯ ಬರೋಬ್ಬರಿ 1,19816 ಮತ ಪಡೆದರೆ, ವಿ.ಸೋಮಣ್ಣ 73,653 ಮತಗಳನ್ನು ಪಡೆದುಕೊಂಡಿದ್ದಾರೆ.

ಅದೇ ರೀತಿ, ಚಾಮರಾಜನಗರದಲ್ಲಿಯೂ ಕಾಂಗ್ರೆಸ್ಸಿನ ಸಿ.ಪುಟ್ಟರಂಗಶೆಟ್ಟಿ ವಿರುದ್ಧ 7,533 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇಲ್ಲಿ ಸೋಮಣ್ಣ 76,325 ಮತ ಪಡೆದರೆ ಸಿ.ಪುಟ್ಟರಂಗಶೆಟ್ಟಿ 83,858 ಮತಗಳನ್ನು ಪಡೆದುಕೊಂಡಿದ್ದಾರೆ.

-ಕಂದಾಯ ಸಚಿವ ಆರ್.ಅಶೋಕ್ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಬರೋಬ್ಬರಿ 1ಲಕ್ಷದ 23 ಸಾವಿರದ 270 ಮತಗಳಿಂದ ಸೋಲು ಕಂಡಿದ್ದಾರೆ. ಅಷ್ಟೇ ಅಲ್ಲದೆ, ಮತಗಳಿಕೆಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿಸಿದ್ದಾರೆ. ಡಿ.ಕೆ.ಶಿವಕುಮಾರ್ 14,3023 ಮತ ಪಡೆದರೆ, ಜೆಡಿಎಸ್ ಪಕ್ಷದ ಬಿ.ನಾಗರಾಜು 20,631 ಮತ ಹಾಗೂ ಆರ್.ಅಶೋಕ್ ಬರೀ 19,753 ಮತಗಳನ್ನು ಪಡೆದುಕೊಂಡಿದ್ದಾರೆ.

-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಬೀಳಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ಸಿನ ಜೆ.ಟಿ.ಪಾಟೀಲ್ ವಿರುದ್ಧ ಬರೋಬ್ಬರಿ 11,129 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಜೆ.ಟಿ. ಪಾಟೀಲ್ ಒಟ್ಟು 95,652 ಮತ ಪಡೆದರೆ, ನಿರಾಣಿ 84,523 ಮತಗಳನ್ನು ಪಡೆದುಕೊಂಡಿದ್ದಾರೆ.

-ಸಾರಿಗೆ ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ಸಿನ ಬಿ.ನಾಗೇಂದ್ರ ವಿರುದ್ಧ ಬರೋಬ್ಬರಿ 29,300ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿ.ನಾಗೇಂದ್ರ ಅವರು 10,3836 ಮತ ಪಡೆದರೆ, ಶ್ರೀರಾಮುಲು 74,536 ಮತಗಳನ್ನು ಪಡೆದುಕೊಂಡಿದ್ದಾರೆ.

-ಗಣಿ ಮತ್ತು ಭೂ ವಿಜ್ಞಾನ ಸಚಿವ ಆಚಾರ್ ಹಾಲಪ್ಪ ಯಲ್ಲಬುರ್ಗಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, 17,181 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಕಾಂಗ್ರೆಸ್‍ನ ಅಭ್ಯರ್ಥಿಬಸವರಾಜ ರಾಯರಡ್ಡಿ ಅವರು 94,330 ಮತಗಳನ್ನು ಪಡೆದರೆ, ಹಾಲಪ್ಪ 77,149 ಮತಗಳನ್ನು ಪಡೆದುಕೊಂಡಿದ್ದಾರೆ.

ಸಕ್ಕರೆ ಸಚಿವ ಶಂಕರ್ ಬಿ.ಪಿ.ಮುನೇನುಕೊಪ್ಪ ಅವರು ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎನ್.ಎಚ್.ಕೋನರೆಡ್ಡಿ ಅವರ ವಿರುದ್ಧ 22,199 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಕೋನರೆಡ್ಡಿ ಅವರು ಒಟ್ಟು 86081 ಮತ ಪಡೆದರೆ, ಮೂನೇನುಕೊಪ್ಪ ಅವರು 63,882 ಮತ ಪಡೆದುಕೊಂಡಿದ್ದಾರೆ.

share
Next Story
X