ಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್‌ರನ್ನು ಸೋಲಿಸಿದ ಕಾಂಗ್ರೆಸ್ ನ ಕೆ.ಷಡಕ್ಷರಿ

ತುಮಕೂರು,ಮೇ 13: ಕಳೆದ ಬಿಜೆಪಿ ಸರಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್ ಸೋಲು ಅನುಭವಿಸಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ತೀವ್ರ ವಿವಾದದಕ್ಕೆ ಗುರಿಯಾಗಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಷಡಕ್ಷರಿ ವಿರುದ್ಧ 17,652 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಷಡಕ್ಷರಿ ಅವರು 17,999 ಮತ ಪಡೆದರೆ, ನಾಗೇಶ್ 54,347 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ಕೆ.ಟಿ. ಶಾಂತಕುಮಾರ್ 26,014 ಮತಗಳನ್ನು ಪಡೆದು ಮೂರನೆ ಸ್ಥಾನ ತಲುಪಿದ್ದಾರೆ.
Next Story





