ನಾಳೆ (ಮೇ 14) ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು, ಮೇ 13: ನಾಳೆ (ರವಿವಾರ) ಸಂಜೆ 5.30ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲವು ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.
'ಇದು ಭಾರತವನ್ನು ಜೋಡಿಸುವ ಫಲಿತಾಂಶ. ಮೂರುವರೆ ವರ್ಷದಿಂದ ಇದ್ದ ಗ್ರಹಣ ಅಳಿಸಿದ ಜನರಿಗೆ ಹೃದಯಪೂರ್ವಕ ಅಭಿನಂದನೆ. ಇದು ಭಾರತವನ್ನು ಜೋಡಿಸುವ ಚುನಾವಣಾ ಫಲಿತಾಂಶ' ಎಂದು ಹೇಳಿದರು.
Next Story