ಹಾಸನ: ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

ಹಾಸನ: ಮೆ 13: ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆಯಲ್ಲಿ ಶುಕ್ರವಾರ ವರದಿಯಾಗಿದೆ.
ಹಿರಿಸಾವೆ ಗ್ರಾಮದ ಶಾಂತಕುಮಾರ್ (42) ಮತ್ತು ಶೀಲ (38) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ತಿಳಿದು ಬಂದಿದೆ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 775 ಸಾವಿರ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 73 ಲಕ್ಷ ಮತ್ತು ಸ್ತ್ರೀ ಶಕ್ತಿ ಸಂಘಗಳಲ್ಲಿ ಸಾಲ ಮಾಡಿದ್ದರೆನ್ನಲಾಗಿದ್ದು, ಸಾಲದ ಬಡ್ಡಿ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಅಣ್ಣ ಗೋಪಾಲ ಹಿರೀಸಾವೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Next Story





