ದ.ಕ. ಜಿಲ್ಲೆಯ ಜನತೆ ಕಾಂಗ್ರೆಸ್‌ನ ಗ್ಯಾರಂಟಿಯನ್ನು ತಿರಸ್ಕರಿಸಿದ್ದಾರೆ : ವೇದವ್ಯಾಸ ಕಾಮತ್

ಮಂಗಳೂರು, ಮೇ 13: ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟವಾದ ಬಹುಮತದೊಂದಿಗೆ ಅಧಿಕಾರ ಹಿಡಿದರೂ, ದ.ಕ.ಜಿಲ್ಲೆಯ ಜನತೆ ಕಾಂಗ್ರೆಸ್‌ನ ಗ್ಯಾರಂಟಿಯನ್ನು ತಿರಸ್ಕರಿಸಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಕೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸತತ ಎರಡನೇ ಬಾರಿಗೆ ವಿಧಾನ ಸಭೆಗೆ ಆಯ್ಕೆಯಾಗಿರುವ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.
2013ರಲ್ಲಿ ಕಾಂಗ್ರೆಸ್ ನೀಡಿದ್ದ ಭರಸೆಗಳನ್ನು ಈಡೇರಿಸಲಿಲ್ಲ. ಈ ಬಾರಿಯೂ ಅವರು ನೀಡಿರುವ ಭರವಸೆಗಳನ್ನು ಶೇ.100ರಷ್ಟು ಈಡೇರಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸಲಿ ನಾವು ಅದಕ್ಕೆ ಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಘಟಾನುಘಟಿ ನಾಯಕರ ಸೋಲಿಗೆ ಕಾಂಗ್ರೆಸ್‌ನ ನಾಯಕರು ಸುಳ್ಳು ಹೇಳಿ ಜನರನ್ನು ನಂಬಿಸಿದ್ದು ಮತ್ತು ಗ್ಯಾರಂಟಿ ಸ್ಕೀಮ್ ಕಾರಣವಾಗಿದೆ ಎಂದರು.
23,962 ಮತಗಳ ಅಂತರಿಂದ ಗೆಲ್ಲಿಸಿದ ಮತದಾರರಿಗೆ, ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ, ಅವಕಾಶ ನೀಡಿದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.