Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಲಂಧರ್ ಕ್ಷೇತ್ರವನ್ನು ಬೃಹತ್ ಅಂತರದಿಂದ...

ಜಲಂಧರ್ ಕ್ಷೇತ್ರವನ್ನು ಬೃಹತ್ ಅಂತರದಿಂದ ಗೆದ್ದ ಆಪ್

13 May 2023 11:13 PM IST
share
ಜಲಂಧರ್ ಕ್ಷೇತ್ರವನ್ನು ಬೃಹತ್ ಅಂತರದಿಂದ ಗೆದ್ದ ಆಪ್

ಚಂಡೀಗಢ, ಮೇ 13: 24 ವರ್ಷಗಳಿಂದ ಕಾಂಗ್ರೆಸ್ ನ ತೆಕ್ಕೆಯಲ್ಲಿದ್ದ ಜಲಂಧರ್ ಲೋಕಸಭಾ ಕ್ಷೇತ್ರವನ್ನು ಆಮ್ ಆದ್ಮಿ ಪಕ್ಷ (ಆಪ್)ವು ಶನಿವಾರ 58,000ಕ್ಕೂ ಅಧಿಕ ಮತಗಳಿಂದ ಗೆದ್ದಿದೆ. ಚತುಷ್ಕೋನ ಸ್ಪರ್ಧೆಯಲ್ಲಿ, ಹಿಂದಿನ ವಿಧಾನಸಭೆಯಲ್ಲಿ ಜಲಂಧರ್ ಪಶ್ಚಿಮ ಕ್ಷೇತ್ರದ ಶಾಸಕರಾಗಿದ್ದ ಸುಶೀಲ್‌ ಕುಮಾರ್ ರಿಂಕು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಕರಮ್ಜಿತ್ ಕೌರ್ರನ್ನು ಸೋಲಿಸಿದರು.

ರಿಂಕು ಈ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಆಪ್ ಸೇರಿದ್ದರು. ಕರಮ್ಜಿತ್ ಕೌರ್ರ ಪತಿ ಹಾಗೂ ಹಾಲಿ ಸಂಸದ ಸಂಟೋಖ್ ಚೌಧರಿ ಭಾರತ್ ಜೋಡೋ ಯಾತ್ರೆಯ ವೇಳೆ ಮೃತಪಟ್ಟ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು. ಇದರೊಂದಿಗೆ ಆಪ್ ಲೋಕಸಭೆಗೆ ಮರುಪ್ರವೇಶ ಮಾಡುತ್ತಿದೆ. ಆಪ್ನ ಮೊದಲ ಲೋಕಸಭಾ ಸದಸ್ಯರಾಗಿದ್ದ ಭಗವಂತ್ ಸಿಂಗ್ ಮಾನ್, ಕಳೆದ ವರ್ಷ ಪಂಜಾಬ್ ವಿಧಾನಸಭಾ ಚುನಾವಣೆಯ ಬಳಿಕ ತನ್ನ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿಯಾದರು. ಆದರೆ, ಉಪಚುನಾವಣೆಯಲ್ಲಿ ಅವರ ಸ್ಥಾನವನ್ನು ಉಳಿಸಿಕೊಳ್ಳಲು ಅವರ ಪಕ್ಷಕ್ಕೆ ಸಾಧ್ಯವಾಗಲಿಲ್ಲ.

ಆಪ್ 3,02,097 ಮತಗಳನ್ನು ಪಡೆದರೆ, ಕಾಂಗ್ರೆಸ್ 2,43,450 ಮತಗಳನ್ನು ಗಳಿಸಿದೆ. ಅಕಾಲಿ-ಬಿಎಸ್ಪಿ ಮಿತ್ರಕೂಟವು 1,58,354 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಬಿಜೆಪಿಯು 1,34,706 ಮತಗಳನ್ನು ಗಳಿಸಿ ನಾಲ್ಕನೇ ಸ್ಥಾನದಲ್ಲಿದೆ.

‘‘ಅಭೂತಪೂರ್ವ’’ ಗೆಲುವು: ಕೇಜ್ರಿವಾಲ್

ಪಂಜಾಬ್ನಲ್ಲಿ ಭಗವಂತ್ ಮಾನ್ ಸರಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಂದಾಗಿ ಈ ‘‘ಅಭೂತಪೂರ್ವ ಗೆಲುವು’’ ಸಾಧ್ಯವಾಯಿತು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ‘‘ನಾವು ಅಭಿವೃದ್ಧಿಯ ರಾಜಕಾರಣ ಮಾಡುತ್ತೇವೆ ಹಾಗೂ ನಮ್ಮ ಕೆಲಸಗಳ ಆಧಾರದಲ್ಲಿ ಜನರಿಂದ ಮತಗಳನ್ನು ಕೇಳುತ್ತೇವೆ. ಭಗವಂತ ಮಾನ್ ಸರಕಾರದ ಕೆಲಸವನ್ನು ಜನರು ಗುರುತಿಸಿದ್ದು, ‘ನಿಮ್ಮ ಜೊತೆ ನಾವಿದ್ದೇವೆ’ ಎಂಬ ಭರವಸೆಯನ್ನು ನೀಡಿದ್ದಾರೆ. ಇದು ದೊಡ್ಡ ಸಂದೇಶವಾಗಿದೆ’’ ಎಂದು ಅವರು ಹೇಳಿದರು.

share
Next Story
X