ದ್ವೇಷ, ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದ: ನಟ ಪ್ರಕಾಶ್ ರಾಜ್

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಆದಿತ್ಯನಾಥ್ ಮೊದಲಾದವರ ಸರಣಿ ಪ್ರಚಾರ ಸಭೆಗಳು ಯಾವುದೇ ಪ್ರಯೋಜನ ನೀಡಿಲ್ಲ. ಈ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ದ್ವೇಷ ಮತ್ತು ಬೂಟಾಟಿಕೆಯನ್ನು ಒದ್ದೋಡಿಸಿದ್ದಕ್ಕಾಗಿ ಕರ್ನಾಟಕಕ್ಕೆ ಧನ್ಯವಾದಗಳು. ಬೆತ್ತಲೆಯಾದ ಚಕ್ರವರ್ತಿ' ಎಂದು ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದಾರೆ.
ಈ ಬರಹದೊಂದಿಗೆ ಅವರು ಎಂದಿನಂತೆ ಜಸ್ಟ್ ಆಸ್ಕಿಂಗ್ ಎಂಬ ಹ್ಯಾಷ್ಟ್ಯಾಗ್ ಬಳಸಿದ್ದಾರೆ.
Thank you Karnataka for Kicking OUT Hatred and Bigotry ..The Emperor is NAKED … ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ.#justasking pic.twitter.com/pVD4GuuaQO
— Prakash Raj (@prakashraaj) May 13, 2023
Next Story







