ಈ ಚುನಾವಣೆ ನರೇಂದ್ರ ಮೋದಿಯವರ ಸೋಲು: ಕೃಷ್ಣ ಭೈರೇಗೌಡ

ಬೆಂಗಳೂರು: ಈ ಚುನಾವಣೆ ಕಾಂಗ್ರೆಸ್ ಗೆ ವಿಜಯ ಮಾತ್ರವಲ್ಲ ನರೇಂದ್ರ ಮೋದಿಯವರ ಸೋಲು ಕೂಡಾ ಹೌದು’ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೃಷ್ಣ ಭೈರೇಗೌಡ, ‘ಕಾಂಗ್ರೆಸ್ ಗೆ ದೊಡ್ಡಮಟ್ಟದಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಎರಡು ದಶಕಗಳ ನಂತರ ನಮ್ಮ ಮೇಲೆ ನಂಬಿಕೆ ಇಟ್ಟು ದೊಡ್ಡ ಬಹುಮತ ಕೊಟ್ಟಿದ್ದಾರೆ. ಈಗ ಜನರ ನಂಬಿಕೆ ಉಳಿಸಿಕೊಳ್ಳಬೇಕಿರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಕಳೆದ ನಾಲ್ಕು ವರ್ಷಗಳಿಂದ ಅತ್ಯಂತ ಭ್ರಷ್ಟ ಸರ್ಕಾರದ ವಿರುದ್ಧ ಜನರು ಸಿಡಿದೆದ್ದಿದ್ದರು. ಹೀಗಾಗಿ ನಮ್ಮ ಮೇಲೆ ಜವಾಬ್ದಾರಿ ಇದೆ. ಹಳಿ ತಪ್ಪಿರುವ ಆಡಳಿತ ಬಿಗಿ ಮಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಉತ್ತಮ ಆಡಳಿತ ನೀಡಬೇಕಿದೆ’ ಎಂದರು.
ಯಾರು ಮುಖ್ಯಮಂತ್ರಿ ಆಗಬೇಕು ಎಂಬ ತೀರ್ಮಾನ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ಮಾಡುತ್ತಾರೆ. ನಾಲ್ಕು ಗೋಡೆಯ ಮಧ್ಯೆ ಕುಳಿತು ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಕೃಷ್ಣ ಭೈರೇಗೌಡ ಹೇಳಿದರು.
Next Story





