ಸಿಎಂ ಆಯ್ಕೆ | ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ

ಬೆಂಗಳೂರು: ನಗರದ ವಸಂತನಗರದಲ್ಲಿರುವ ಶಾಂಗ್ರಿಲಾ ಹೊಟೇಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಆರಂಭಗೊಂಡಿದೆ. ಸಭೆಯಲ್ಲಿ ನೂತನ ಮುಖ್ಯಮಂತ್ರಿ ಘೋಷಿಸುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಐಸಿಸಿ ವೀಕ್ಷಕರಾದ ದೀಪಕ್ ಬಬಾರಿಯಾ, ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ನೂತನ ಶಾಸಕರು ಸಭೆಗೆ ಆಗಮಿಸಿದ್ದಾರೆ.
ನೂತನ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರು ಗುರುವಾರದಂದು (ಮೇ 18) ಪ್ರಮಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





