ಬಂಟಕಲ್: ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ- ಪ್ರದರ್ಶನ

ಶಿರ್ವ: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ಕಾಲೇಜಿನ ಪಠ್ಯೇತರ ಘಟಕ ಮತ್ತು ಸಾಂಸ್ಕೃತಿಕ ಘಟಕವು ಐಎಸ್‌ಟಿಇ ಘಟಕದ ಸಹಯೋಗದೊಂದಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಇತ್ತೀಚೆಗೆ ಸಂಸ್ಥೆಯ ಆವರಣದಲ್ಲಿ ನಡೆಯಿತು.
ಮೆಕ್ಯಾನಿಕಲ್ ವಿಭಾಗದಿಂದ 8 ಪ್ರಾಜೆಕ್ಟ್‌ಗಳು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯು ನಿಕೇಶನ್ ವಿಭಾಗದಿಂದ 21 ಪ್ರಾಜೆಕ್ಟ್, ಸಿವಿಲ್ ವಿಭಾಗದಿಂದ 7 ಪ್ರಾಜೆಕ್ಟ್‌ಗಳು ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ 31 ಪ್ರಾಜೆಕ್ಟ್ ಗಳನ್ನು ವಿಭಾಗಗಳಲ್ಲಿ ಪ್ರದರ್ಶಿಸಲಾಯಿತು. ಪ್ರಾಜೆಕ್ಟ್‌ಗಳ ಮಾದರಿಯನ್ನು ವಿದ್ಯಾರ್ಥಿಗಳು ಬಹಳ ಉತ್ಸಾಹ ದಿಂದ ಪ್ರದರ್ಶಿಸಿದರು.
ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್ ಡಾ.ಸುದರ್ಶನ್ ರಾವ್ ಕೆ. ಮತ್ತು ವಿಭಾಗದ ಮುಖ್ಯಸ್ಥರು ಪ್ರಾಜೆಕ್ಟ್ ಪ್ರದರ್ಶನಕ್ಕೆ ಭೇಟಿ ನೀಡಿ ಪ್ರಾಜೆಕ್ಟ್ ಪ್ರದರ್ಶಿಸುತ್ತಿದ್ದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಸಲಹೆ ನೀಡಿದರು. ಅಲ್ಲದೆ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪ್ರಾಜೆಕ್ಟ್ ಪ್ರದರ್ಶನಕ್ಕೆ ಭೇಟಿ ನೀಡಿದರು ಮತ್ತು ಅಂತಿಮ ವರ್ಷದ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿದರು.
ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಾವು ಈ ನಾಲ್ಕು ವರ್ಷದಲ್ಲಿ ಅಭ್ಯಾಸ ಮಾಡಿದ ವಿಷಯಗಳನ್ನು ಅಂತಿಮ ವರ್ಷದಲ್ಲಿ ಪ್ರಾಜೆಕ್ಟ್ ಮೂಲಕ ತಮ್ಮ ಯೋಚನೆ ಮತ್ತು ಯೋಜನೆಯನ್ನು ರೂಪಿಸಲು ಈ ಪ್ರಾಜೆಕ್ಟ್ ಸ್ಪರ್ಧೆಯು ಒಂದು ಅಡಿಪಾಯವಾಗಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರತೀ ವಿಭಾಗ ದಲ್ಲಿ ಎರಡು ಉತ್ತಮ ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಲಾಗುತ್ತದೆ.







