ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಉಡುಪಿ : ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘವು ಎಸೆಸೆಲ್ಸಿ ಪ್ರಸಕ್ತ ಸಾಲಿನ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ರಾಜ್ಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಸರಕಾರಿ ನೌಕರ ರಾಗಿರಬೇಕು. ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಎಸೆಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದು ಉತ್ತೀರ್ಣ ಆಗಿರಬೇಕು.
ಅರ್ಹ ವಿದ್ಯಾರ್ಥಿಗಳು ಮೇ 31ರೊಳಗೆ https://bit.ly/ksgeapp2023ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080- 22354748/83, 9902135813, 94486682210 ಸಂಪರ್ಕಿಸಬಹುದು ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story