ಕಾನೂನು ಕ್ಷೇತ್ರದಲ್ಲಿದ್ದ ಪೊನ್ನಣ್ಣ, ನಯನಾ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ

ಬೆಂಗಳೂರು, ಮೇ 14: ಕರ್ನಾಟಕ ಹೈಕೋರ್ಟ್‍ನಲ್ಲಿ ಐದು ವರ್ಷಗಳ ಕಾಲ ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಆಗಿ ಸೇವೆ ಸಲ್ಲಿಸಿದ್ದ ಎ.ಎಸ್.ಪೊನ್ನಣ್ಣ, ರಾಜ್ಯ ಹೈಕೋರ್ಟ್‍ನಲ್ಲಿ ಪ್ರಾಕ್ಟೀಸ್ ಮಾಡಿದ್ದ ನಯನಾ ಮೋಟಮ್ಮ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಎಎಜಿ, ಕೆಪಿಸಿಸಿ ಕಾನೂನು ಕೋಶದ ಅಧ್ಯಕ್ಷರಾದ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರು ಬೆಂಗಳೂರು ವಿವಿಯ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.
ಕಾರ್ಪೊರೇಟ್ ವಕೀಲೆಯಾಗಿದ್ದ ನಯನಾ ಮೋಟಮ್ಮ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಇವರು ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಪುತ್ರಿಯಾಗಿದ್ದು, ರಾಷ್ಟ್ರೀಯ ಕಾನೂನು ವಿವಿಯ ವಿದ್ಯಾರ್ಥಿನಿಯಾಗಿದ್ದಾರೆ.
Next Story





