ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ ಹಾಕಿದ ಶ್ರದ್ಧಾಂಜಲಿ ಬ್ಯಾನರ್ ಪ್ರತ್ಯಕ್ಷ

ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು ಅಳವಡಿಸಿರುವ ಘಟನೆ ಪುತ್ತೂರು ಆಸುಪಾಸಿನಲ್ಲಿ ನಡೆದಿದೆ.
ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಈ ಬ್ಯಾನರನ್ನು ಅಳವಡಿಸಲಾಗಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ.
ಭಾರತೀಯ ಜನತಾ ಪಾರ್ಟಿಯ ಪುತ್ತೂರು ಕ್ಷೇತ್ರದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು ಎಂದು ಬರೆಯಲಾಗಿದೆ.
ಈ ಬ್ಯಾನರ್ ನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
Next Story