ಸಿಎಂ ಆಯ್ಕೆ | ಸಿದ್ದರಾಮಯ್ಯ-ಡಿಕೆಶಿಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಧ್ಯಾಹ್ನ 1 ಗಂಟೆ ಬಳಿಕ ದೆಹಲಿಗೆ ತೆರಳಲಿದ್ದಾರೆ.
ಶಾಸಕಾಂಗ ಪಕ್ಷದ ನಾಯಕ'ನ ಆಯ್ಕೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದತ್ತ ಪೊಲೀಸ್ ಭದ್ರತೆ ಮಾಡಲಾಗಿದೆ.
ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಹೈಕಮಾಂಡ್ ಅಂಗಲದಲ್ಲಿದ್ದು, ಇಂದೇ ಮುಖ್ಯಮಂತ್ರಿ ಘೋಷಣೆಯಾಗುವ ಸಾಧ್ಯತೆ ಇದೆ.
ಇನ್ನು ನೂತನ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರು ಗುರುವಾರದಂದು (ಮೇ 18) ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story