ಹೈಕಮಾಂಡ್ ನ ಉಡುಗೊರೆಯ ನಿರೀಕ್ಷೆಯಲ್ಲಿದ್ದೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕಾಂಗ್ರೆಸ್ ಸಂಪ್ರದಾಯದಂತೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಇನ್ನು ಹೈಕಮಾಂಡ್ ನ ಉಡುಗೊರೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೆಹಲಿಗೆ ಹೋಗುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ರಾಜ್ಯದ ಜನತೆ ನನ್ನ ಮೇಲೆ ವಿಶ್ವಾಸ ಇಟ್ಟು ಮತ ಚಲಾಯಿಸಿದ್ದಾರೆ. ಎಲ್ಲ ಕಷ್ಟ, ದೌರ್ಜನ್ಯ, ಡಬಲ್ ಎಂಜಿನ್ ಬಲದ ನಡುವೆಯೂ ಜನತೆ 136 ಸೀಟುಗಳ ಗಿಫ್ಟ್ ಕೊಟ್ಟಿದ್ದಾರೆ. ಇದೇ ನನಗೆ ನನ್ನ ಬರ್ತ್ ಡೇ ಗಿಫ್ಟ್ ಎಂದರು.
ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳು ಸಂಸದ ಡಿ.ಕೆ. ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಬೆಳಿಗ್ಗೆ ಭೇಟಿ ಮಾಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story