Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪರ ಕಣ್ಣೀರಿನಲ್ಲಿ ಬಿಜೆಪಿ...

ಯಡಿಯೂರಪ್ಪರ ಕಣ್ಣೀರಿನಲ್ಲಿ ಬಿಜೆಪಿ ಸರಕಾರ ಕೊಚ್ಚಿ ಹೋಗಿದೆ...: ದಿಂಗಾಲೇಶ್ವರ ಸ್ವಾಮೀಜಿ

''ಬ್ರಾಹ್ಮಣ ವಿಚಾರವಾಗಿ ನಾನು 6 ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ'' ► ಲಿಂಗಾಯತ ನಾಯಕನಿಗೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿ ಆಗ್ರಹ

15 May 2023 2:16 PM IST
share
ಯಡಿಯೂರಪ್ಪರ ಕಣ್ಣೀರಿನಲ್ಲಿ ಬಿಜೆಪಿ ಸರಕಾರ ಕೊಚ್ಚಿ ಹೋಗಿದೆ...: ದಿಂಗಾಲೇಶ್ವರ ಸ್ವಾಮೀಜಿ
''ಬ್ರಾಹ್ಮಣ ವಿಚಾರವಾಗಿ ನಾನು 6 ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ'' ► ಲಿಂಗಾಯತ ನಾಯಕನಿಗೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿ ಆಗ್ರಹ

ಹುಬ್ಬಳ್ಳಿ: 'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಅಂತ ನಾನು ಈ ಹಿಂದೆ ಹೇಳಿದ್ದೆ. ಈಗ ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ' ಎಂದು  ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಅಂದು ಒಬ್ಬ ವ್ಯಕ್ತಿಯನ್ನು ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲಾ ಸಮಾಜದ ನಾಯಕರು ಯಡಿಯೂರಪ್ಪರನ್ನು ಮುಂದುವರಿಸಿಬೇಕು ಎಂದಿದ್ದರು. ಬಿಜೆಪಿ ನಾಯಕರು ಯಾವದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಸ್ಥಿಗೆ ಕಾರಣ' ಎಂದು ತಿಳಿಸಿದರು. 

'ನಾನು ಈ ಹಿಂದೆ ಸರಕಾರದ ಶೇ.30 ಕಮಿಷನ್ ಬಗ್ಗೆ ಮಾತನಾಡಿದಾಗ, ನನ್ನ ವಿರುದ್ಧ ದುರಹಂಕಾರಿಯಾಗಿ ಮಾತನಾಡಿ, ಗೂಂಡಾ ವೃತ್ತಿಯಲ್ಲಿ ದಾಳಿ ಮಾಡಿದ್ದರು. ಅದರ ಪರಿಣಾಮವೇ ಈ ಹೀನಾಯ ಸೋಲು ಎಂದ ಸ್ವಾಮೀಜಿ, ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು ಖಾವಿಧಾರಿಗಳನ್ನ‌ ಸರಿಯಾಗಿ ನಡೆಸುಕೊಳ್ಳಲಿಲ್ಲ. ಖಾವಿ ದಾರಿಗಳು ಪಾಠ ಮಾಡಿದ್ದರೂ, ಅವರು ಪಾಠ ಕಲಿಯಲಿಲ್ಲ. ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೇ ಇಂದಿನ ಸ್ಥಿತಿಗೆ ಕಾರಣ' ಎಂದರು. 

'ಯಡಿಯೂರಪ್ಪ, ಸವದಿ,ಶೆಟ್ಟರ್, ಈಶ್ವರಪ್ಪ ಕಡೆಗಣಸಿರೋದೆ ಇದಕ್ಕೆಲ್ಲ ‌ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತ ಕೇಳಬೇಕು ಅಂದ್ರೆ ಏನು?' ಎಂದು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ದ ಆಕ್ರೋಶ ಹೊರ ಹಾಕಿದರು. 

ಇನ್ನು ಜಗದೀಶ್ ಶೆಟ್ಟರ್, ಸವದಿಯನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಇದೇ ವೇಳೆ ಸ್ವಾಮೀಜಿಗಳು ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದರು. 

''ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ''

'ಬ್ರಾಹ್ಮಣ ವಿಚಾರವಾಗಿ ನಾನು ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ. ರಾಜ್ಯದಲ್ಲಿ ಏನಾಗಿದೆ ಅನ್ನೋ ದಾಖಲೆ ಇವೆ. ಬ್ರಾಹ್ಮಣರ ಬಗ್ಗೆ ಮಾತಾಡೋಕೆ ನನಗೆ ಭಯ ಇಲ್ಲ, ನನಗೆ ಯಾರ ಅಂಕುಶವೂ ಇಲ್ಲ' ಎಂದು ಸ್ವಾಮೀಜಿಗಳು ತಿಳಿಸಿದರು. 

share
Next Story
X