ಮರಾಠಿ ಸಮುದಾಯ ಕಲಾ ಸಂಘದಿಂದ ಬೇಸಿಗೆ ಶಿಬಿರ

ಉಡುಪಿ, ಮೇ 15: ವಿದ್ಯಾರ್ಥಿಗಳಿಗೆ ಶಿಬಿರಗಳು ಜೀವನ ಮೌಲ್ಯವನ್ನು ದೊರಕಿಸಿಕೊಡುವ ಜೊತೆಗೆ ಚಟುವಟಿಕೆ ಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕರಿ ಯಾಗಲಿದೆ ಎಂದು ಕೊಡಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಸದಾನಂದ ಪ್ರಭು ಹೇಳಿದ್ದಾರೆ.
ಅಂಜಾರು ಶ್ರೀದುರ್ಗಾಪರಮೇಶ್ವರಿ ಮರಾಠಿ ಸಮುದಾಯ ಕಲಾ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಅಂಜಾರು ಮಠದ ಅರ್ಚಕ ಸೀತಾರಾಮ್ ಆಚಾರ್ಯ ವಹಿಸಿದ್ದರು. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಸಂಧ್ಯಾ ಕಾಮತ್ ಮುಖ್ಯ ಅತಿಥಿಯಾಗಿದ್ದರು. ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ವಿಠ್ಠಲ್ ನಾಯ್ಕ್, ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಹರೀಶ್ ನಾಯ್ಕ್, ರಾಘವೇಂದ್ರ ನಾಯ್ಕ್ ಮಣಿಪಾಲ ಹಾಗೂ ಭರತರಾಜ್ ಪರ್ಕಳ, ಶಿಬಿರದ ಸಂಯೋಜಕ ನಾಗೇಶ್ ನಾಯ್ಕ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.
Next Story