IPL 2023: ಪ್ಲೇಆಫ್ ಗೆ ಲಗ್ಗೆ ಇಟ್ಟ ಗುಜರಾತ್; ಹೈದರಾಬಾದ್ ವಿರುದ್ಧ 34 ರನ್ ಗಳ ಜಯ

ಅಹ್ಮದಾಬಾದ್: ಸನ್‌ರೈಸ್ ಹೈದರಾಬಾದ್ ತಂಡವನ್ನು 34 ರನ್‌ಗಳಿಂದ ಗುಜರಾತ್ ಟೈಟಾನ್ಸ್ ತಂಡವು ಮಣಿಸಿ, ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದೆ. ಆ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇಆಫ್‌ಗೆ ತಲುಪಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಗುಜರಾತ್ ಟೈಟಾನ್ಸ್ ಪಾತ್ರವಾಗಿದೆ.
ಸನ್‌ರೈಸ್ ಹೈದರಾಬಾದ್ ಟೂರ್ನಿನಿಂದ ನಿರ್ಗಮಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಶುಭಮನ್ ಗಿಲ್ ರ ಚೊಚ್ಚಲ ಶತಕದ ಸಹಾಯದೊಂದಿಗೆ 20 ಓವರ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು.
ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡವು 9 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ ಸೋಲೊಪ್ಪಿಕೊಂಡಿದೆ.
Next Story