Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲೆಕ್ಕಪರಿಶೋಧನೆಗೆ ದಾಖಲೆ ಸಲ್ಲಿಸದ 147...

ಲೆಕ್ಕಪರಿಶೋಧನೆಗೆ ದಾಖಲೆ ಸಲ್ಲಿಸದ 147 ಗ್ರಾಮಪಂಚಾಯತ್‌ಗಳು

251 ಕೋಟಿ ರೂ. ಜಮೆ, ಖರ್ಚಿನ ದಾಖಲೆಗಳೇ ಇಲ್ಲ!

ಜಿ.ಮಹಾಂತೇಶ್ಜಿ.ಮಹಾಂತೇಶ್16 May 2023 8:16 AM IST
share
ಲೆಕ್ಕಪರಿಶೋಧನೆಗೆ ದಾಖಲೆ ಸಲ್ಲಿಸದ 147 ಗ್ರಾಮಪಂಚಾಯತ್‌ಗಳು
251 ಕೋಟಿ ರೂ. ಜಮೆ, ಖರ್ಚಿನ ದಾಖಲೆಗಳೇ ಇಲ್ಲ!

ಬೆಂಗಳೂರು, ಮೇ 16: ರಾಜ್ಯದ ಒಟ್ಟು ಗ್ರಾಮ ಪಂಚಾಯತ್‌ಗಳ ಪೈಕಿ 147 ಪಂಚಾಯತ್‌ಗಳು ದಾಖಲೆ ನಿರ್ವಹಣೆಯಲ್ಲಿ ಮತ್ತು ಲೆಕ್ಕ ಪರಿಶೋಧನೆಗೆ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾಗಿವೆ. ಅದೇ ರೀತಿ ಲೆಕ್ಕಪರಿಶೋಧನೆಗೆ 251.99 ಕೋಟಿ ರೂ.ಗಳ ಜಮೆ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಪತ್ತೆ ಹಚ್ಚಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯತ್‌ಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯತ್‌ಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಅದೇ ರೀತಿ ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರು ವಿಭಾಗದ ಒಟ್ಟು 121 ಪಂಚಾಯತ್‌ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಚಾರ್ಜ್‌ಲಿಸ್ಟ್ ತಯಾರಿಸಿ ಕಾರ್ಯಭಾರವನ್ನು ಹಸ್ತಾಂತರ ಮಾಡಿಲ್ಲ.

ಬೆಂಗಳೂರು ವಿಭಾಗದಲ್ಲಿ 14, ಬೆಳಗಾವಿ ವಿಭಾಗದಲ್ಲಿ 56, ಕಲಬುರಗಿ ವಿಭಾಗದಲ್ಲಿ 54, ಮೈಸೂರು ವಿಭಾಗದಲ್ಲಿ 23 ಸೇರಿ ಒಟ್ಟು 147 ಪಂಚಾಯತ್‌ಗಳು ಜಮೆ ಮತ್ತು ವೆಚ್ಚದ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸಿಲ್ಲ. ಇದರ ಮೊತ್ತವೇ 251,99,1,892 ರೂ.ಗಳು ಎಂಬುದು ವರದಿಯಿಂದ ತಿಳಿದು ಬಂದಿದೆ.

ಗ್ರಾಮ ಪಂಚಾಯತ್‌ಗಳು ಪೂರ್ಣ ಪ್ರಮಾಣದಲ್ಲಿ ಬ್ಯಾಂಕ್‌ಗಳ ಮೂಲಕ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುತ್ತಿದೆ. ಬ್ಯಾಂಕ್ ಚೆಕ್ ಪುಸ್ತಕಗಳು, ಕಾಮಗಾರಿ ಅಳತೆ ಪುಸ್ತಕಗಳು ಸೇರಿದಂತೆ ಪ್ರಮುಖ ಆರ್ಥಿಕ ದಾಖಲೆಗಳನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಅಲ್ಲದೆ ಈ ಎಲ್ಲಾ ದಾಖಲೆಗಳನ್ನು ಕಾರ್ಯಭಾರ ವಹಿಸಿಕೊಂಡ ಅಧಿಕಾರಿಗೆ ಕಾರ್ಯಭಾರ ಪಟ್ಟಿಯ ಮುಖಾಂತರ ಹಸ್ತಾಂತರಿಸಬೇಕು. ಆದರೆ 121 ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು ಕಾರ್ಯಭಾರ ಪಟ್ಟಿ ಮುಖಾಂತರ ಈ ಯಾವ ದಾಖಲೆಗಳನ್ನೂ ಹಸ್ತಾಂತರ ಮಾಡಿಲ್ಲ ಎಂಬುದು ವರದಿಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ.

ಕರ್ನಾಟಕ ಪಂಚಾಯತ್‌ರಾಜ್ ನಿಯಮಗಳು 2006ರ ನಿಯಮ 43ರ ಅನ್ವಯ ಪಾವತಿಗೆ ಬಿಲ್ ಅಥವಾ ವೋಚರ್‌ಗಳ ಆಧಾರ ಇರಬೇಕು. ಕರ್ನಾಟಕ ಆರ್ಥಿಕ ಸಂಹಿತೆ ಸೆಕ್ಷನ್ 3 ಮತ್ತು 49ರ ಅನ್ವಯ ವೆಚ್ಚಗಳ ಲೆಕ್ಕಪತ್ರಗಳನ್ನು ನಿರ್ವಹಿಸಬೇಕು. ಲೆಕ್ಕ ಪರಿಶೋಧನೆಗೆ ಅಂತಹ ದಾಖಲೆಗಳನ್ನು ಒದಗಿಸಬೇಕು.

ವೋಚರ್ ಹಾಗೂ ಅಗತ್ಯ ಪೂರಕ ದಾಖಲೆಗಳನ್ನು ಲೆಕ್ಕಪರಿಶೋಧನೆಗೆ ಹಾಜರುಪಡಿಸದೇ ಇದ್ದಲ್ಲಿ ಇದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯಲೋಪವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ ಅಂತಹ ಪಿಡಿಒ ವಿರುದ್ಧ ಶಿಸ್ತು ಕ್ರಮ, ಸೇವಾ ಭಡ್ತಿ ತಡೆಯುವುದು, ಸಿವಿಲ್, ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿದೆ. ಹಾಗೆಯೇ ಮೈಸೂರು ಆಡಿಟ್ ಮ್ಯಾನ್ಯುಯಲ್ ನಿಯಮ 537ರ ಅನುಸಾರ ಹಣ ದುರುಪಯೋಗವಾಗಿದೆ ಎಂದು ಸಹ ಪರಿಗಣಿಸಬಹುದು ಎಂದು ವರದಿಯಲ್ಲಿ ವಿವರಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X