ಮಲಗಿದ್ದಲ್ಲೇ ಮೃತಪಟ್ಟ ಹಲಸೂರು ಗೇಟ್ ಸಂಚಾರ ಪೊಲೀಸ್ ಎಎಸ್‌ಐ

ಬೆಂಗಳೂರು, ಮೇ.16: ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಮಲಗಿದ್ದ ರೀತಿಯಲ್ಲೇ ಮೃತಪಟ್ಟರುವ ಘಟನೆ ಮಂಗಳವಾರ ಮುಂಜಾನೆ ವರದಿಯಾಗಿದೆ.
ಮೃತರನ್ನು ಬೆಂಗಳೂರಿನ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಆನಂದ್ ಕುಮಾರ್ ನಿನ್ನೆ ರಾತ್ರಿ ಪಾಳಿ ಕೆಲಸ ಮಾಡಿ ನಾಗರಭಾವಿ ಬಳಿಯ ಮನೆಯಲ್ಲಿ ಮಲಗಿದ್ದರು. ಆದರೆ, ಇಂದು ಮುಂಜಾನೆ ಎಂದಿನಂತೆ ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಆತಂಕದಲ್ಲೇ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.
ಈ ವೇಳೆ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಆನಂದ್ ಕುಮಾರ್ ಸಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
Next Story