ಜಗದೀಶ್ ಶೆಟ್ಟರ್ ರನ್ನು ಭೇಟಿಯಾದ ಪರಮೇಶ್ವರ್, ದಿನೇಶ್ ಗುಂಡೂರಾವ್
ಹುಬ್ಬಳ್ಳಿ: ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಶಾಸಕರಾದ ಡಾ. ಜಿ. ಪರಮೇಶ್ವರ್ ರವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ರವರ ನಿವಾಸಕ್ಕೆ ತೆರಳಿ ಕೆಲ ಕಾಲ ಚರ್ಚೆ ನಡೆಸಿದರು.
ಈ ವೇಳೆ ಜಗದೀಶ್ ಶೆಟ್ಟರ್ ರವರ ಅನಿರೀಕ್ಷಿತ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿ ''ಯಾವುದೇ ಸಂದರ್ಭದಲ್ಲಿ ಪಕ್ಷ ನಿಮ್ಮೊಂದಿಗಿದೆ ಎದೆಗುಂದುವುದು ಬೇಡ'' ಎಂದು ಆತ್ಮಸ್ಥೈರ್ಯ ತುಂಬಿದರು ಎನ್ನಲಾಗಿದೆ.
ಶಾಸಕರಾದ ದಿನೇಶ್ ಗುಂಡೂರಾವ್, ಮಾಜಿ ಪರಿಷತ್ ಸದಸ್ಯರಾದ ಎಂ.ಸಿ.ವೇಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ @JagadishShettar ಅವರ ನಿವಾಸಕ್ಕೆ ತೆರಳಿ, ಅವರೊಂದಿಗೆ ಮಾತುಕತೆ ನಡೆಸಿದೆ. ರಾಜಕೀಯದಲ್ಲಿ ಸೋಲು-ಗೆಲುವು ಸರ್ವೇಸಾಮಾನ್ಯ. ಅವರೊಂದಿಗೆ ನಾವಿದ್ದೇವೆ. ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ದಿನೇಶ್ ಗುಂಡೂರಾವ್, ಮಾಜಿ ವಿ.ಪ. ಸದಸ್ಯರಾದ ಎಂ.ಸಿ.ವೇಣುಗೋಪಾಲ್ ರವರು ಉಪಸ್ಥಿತರಿದ್ದರು. pic.twitter.com/pf0l48oSYh
— Dr. G Parameshwara (@DrParameshwara) May 16, 2023
Next Story