ಬೆನ್ನಿಗೆ ಚೂರಿ ಹಾಕುವುದಿಲ್ಲ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 20 ಸೀಟು ಗೆಲ್ಲುವುದು ನನ್ನ ಗುರಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಜೊತೆ ತೀವ್ರ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಬೆಂಗಳೂರಿನ ತಮ್ಮ ನಿವಾಸದಿಂದ ದೆಹಲಿಗೆ ಹೊರಟಿದ್ದಾರೆ.
ದೆಹಲಿಗೆ ತೆರಳುತ್ತಿದ್ದ ವೇಳೆ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ ಅವರು, 'ಪಕ್ಷ ಬಯಸಿದರೆ ನನಗೆ ಜವಾಬ್ದಾರಿ ನೀಡಬಹುದು. ನಮ್ಮದು ಒಂದು ಒಗ್ಗಟ್ಟಿನ ಮನೆ. 135 ಶಾಸಕರ ಬಲವಿದೆ. ಯಾರನ್ನೂ ವಿಭಜಿಸಲು ಒಡೆಯಲು ನನಗೆ ಮನಸ್ಸಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
'ಹೈಕಮಾಂಡ್ ನನ್ನನ್ನು ಬಯಸುತ್ತದೋ ಇಲ್ಲವೋ ನನ್ನ ಜವಾಬ್ದಾರಿಯನ್ನು ನಾನು ಮಾಡುತ್ತೇನೆ. ಬೆನ್ನಿಗೆ ಚೂರಿ ಹಾಕುವ ಬೆದರಿಕೆ ಹಾಕುವ ಕೆಲಸ ಮಾಡುವುದಿಲ್ಲ, ಮುಂದಿನ ಲೋಕಸಭೆ ಚುನಾವಣೆಯಲ್ಲಿ 20 ಸೀಟು ಗೆಲ್ಲುವುದು ನನ್ನ ಗುರಿ' ಎಂದು ಹೇಳಿದ್ದಾರೆ.
Next Story