Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಗೆ ವೋಟ್‌ ಹಾಕಿದ್ದಕ್ಕೆ ಹಲ್ಲೆ...

ಬಿಜೆಪಿಗೆ ವೋಟ್‌ ಹಾಕಿದ್ದಕ್ಕೆ ಹಲ್ಲೆ ಎಂದು ಈಶ್ವರಪ್ಪರ ಎದುರು ಗೋಳಾಡಿದ್ದ ಆಟೋ ಚಾಲಕ: ಪ್ರಕರಣಕ್ಕೆ ತಿರುವು

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ

16 May 2023 5:12 PM IST
share
ಬಿಜೆಪಿಗೆ ವೋಟ್‌ ಹಾಕಿದ್ದಕ್ಕೆ ಹಲ್ಲೆ ಎಂದು ಈಶ್ವರಪ್ಪರ ಎದುರು ಗೋಳಾಡಿದ್ದ ಆಟೋ ಚಾಲಕ: ಪ್ರಕರಣಕ್ಕೆ ತಿರುವು
ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ

ಶಿವಮೊಗ್ಗ:  ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಮ್ ಯುವಕರು ನನ್ನ ಮೇಲೆ ಹಲ್ಲೆ ಮಾಡಿ, ಆಟೋ ಜಖಂಗೊಳಿಸಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಈಶ್ವರಪ್ಪರ ಎದುರು ಗೋಳಾಡಿ, ಸುದ್ದಿಯಾಗಿದ್ದ ಆಟೋ ಚಾಲಕ ಈಗ ಸ್ಪಷ್ಟೀಕರಣ ನೀಡಿದ್ದಾರೆ.

ಹಾನಿಯಾಗಿದ್ದ ಗಾಜು, ಹರಿದ ಟಾಪ್‌ನೊಂದಿಗೆ ಹರೀಶ್‌ ರಾವ್‌ ಎಂಬ ಚಾಲಕ ತನ್ನ ಆಟೋವನ್ನು ಸೋಮವಾರ ಬೆಳಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತಂದಿದ್ದ. ಇದೇ ವೇಳೆ ಎಸ್‌ಪಿ ಕಚೇರಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡರು ಮತ್ತು ಮಾಧ್ಯಮದವರನ್ನು ನೋಡುತ್ತಿದ್ದಂತೆ ಹರೀಶ್‌ ರಾವ್‌ ಸಂಕಟ ಹೇಳಿಕೊಂಡಿದ್ದ. ''ಬಿಜೆಪಿಗೆ ಮತ ನೀಡಿದ್ದಕ್ಕೆ ತನ್ನ ಮೇಲೆ ಮೂವರು ಮುಸ್ಲಿಮ್ ಯುವಕರು ಹಲ್ಲೆ ನಡೆಸಿ, ಆಟೋ ಜಖಂ ಮಾಡಿದ್ದಾರೆ'' ಎಂದು ಕಣ್ಣೀರು ಸುರಿಸಿ, ಈಶ್ವರಪ್ಪ ಅವರ ಕಾಲಿಗೆ ಬಿದ್ದು ರಕ್ಷಣೆಗೆ ಮೊರೆ ಇಟ್ಟಿದ್ದ.

ಹರೀಶ್‌ ರಾವ್‌ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೆ.ಎಸ್.ಈಶ್ವರಪ್ಪ, ಆಟೋ ರಿಪೇರಿ ಮಾಡಿಸಿಕೊಳ್ಳುವಂತೆ ಜೇಬಿನಿಂದ ಹಣ ತೆಗೆದು ಕೊಟ್ಟಿದ್ದರು. ರಿಪೇರಿ ಮಾಡಿಸಿಕೊಂಡು ಮನೆ ಬಳಿ ಬಾ ಎಂದು ಸೂಚಿಸಿದ್ದರು. ಅಲ್ಲದೆ ಸೂಕ್ತ ತನಿಖೆ ನಡೆಸುವಂತೆ ಪೊಲೀಸರಿಗೆ ತಿಳಿಸಿದ್ದರು.

''ಬಿಜೆಪಿಗೆ ಮತ ನೀಡಿದ್ದಕ್ಕೆ ಮುಸ್ಲಿಮ್‌ ಯುವಕರಿಂದ ಹಲ್ಲೆ '' ಎಂದು ಮಾಧ್ಯಮಗಳು, ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋಗಳು ಹರಿದಾಡಿದವು. ಅಲ್ಲದೇ ಬಿಜೆಪಿ ಮತ್ತು ಅದರ ಬೆಂಬಲಿಗರ ಸಾಮಾಜಿಕ ಜಾಲತಾಣದಲ್ಲಿ ಘಟನೆ ವಿರುದ್ಧ ಆಕ್ರೋಶ ಹೊರಹಾಕಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಗಳು ಕೇಳಿ ಬಂದವು. 

ಪ್ರಕರಣಕ್ಕೆ ತಿರುವು; ಆಟೋ ಚಾಲಕ ಹೇಳಿದ್ದೇನು?

ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ನಿಜ ಸ್ಥಿತಿ ಅರಿಯಲು ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಕಾರ್ಪೊರೇಟರ್‌ ,ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ಎಚ್‌.ಸಿ.ಯೋಗೇಶ್‌ ಅವರ ನೇತೃತ್ವದ ನಿಯೋಗ ವಿನೋಬನಗರ ಠಾಣೆಗೆ ಭೇಟಿ ನೀಡಿತ್ತು. ಆಗ ಎದುರಾದ ಚಾಲಕ, ನಡೆದ ಘಟನೆ ಬಗ್ಗೆ ವಿವರಿಸಿದ್ದಾನೆ. ''ಬಿಜೆಪಿಗೆ ಮತ ನೀಡಿದ್ದಕ್ಕೆ ದಾಳಿಯಾಯಿತು ಎಂದು ನಾನು ಎಲ್ಲಿಯೂ ಹೇಳಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

''ನಾನು, ಹಾಗೂ ಮೂವರು ಮುಸ್ಲಿಮ್ ಸ್ನೇಹಿತರು  ಸ್ನೇಹಿತರು ಒಟ್ಟಿಗೆ ಬಾರ್ ಗೆ ತೆರಳಿದ್ದೆವು. ಅಲ್ಲಿ ಸ್ನೇಹಿತರ ಮಧ್ಯೆ ಜಗಳವಾಗಿ ಆಗ ಆಟೋ ಟಾಪ್‌, ಗ್ಲಾಸ್‌ ಒಡೆದು ಹೋಗಿದೆ. ಅದಕ್ಕೆ ದೂರು ಕೊಡಲು ಎಸ್‌ಪಿ ಕಚೇರಿಗೆ ಹೋಗಿದ್ದೆ. ನಾನು ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಹೊಡೆದರು ಎಂದು ಹೇಳಿಲ್ಲ. ನನ್ನ ಬಳಿ ಇದ್ದ ಅಮೀರ್ ಆ ತರಹ ಹೇಳಿದ, ನನ್ನ ತಪ್ಪಿಲ್ಲ. ಈ‍ಶ್ವರಪ್ಪ ಅವರು ದುಡ್ಡು ಕೊಟ್ಟರು. ಆದರೆ ಅದು ಎಷ್ಟಿತ್ತು ಎಂದು ಗೊತ್ತಿಲ್ಲ. ಅದನ್ನು ಯಾರೋ ಜೇಬಿನಿಂದ ಎತ್ತಿಕೊಂಡು ಹೋಗಿದ್ದಾರೆ. ಕುಡಿದ ಮತ್ತಿನಲ್ಲಿ ಆದ ಜಗಳಕ್ಕೆ ಆಟೋ ಹಾನಿಯಾಗಿದ್ದು, ಎಲ್ಲರೂ ಬಾಲ್ಯ ಸ್ನೇಹಿತರೇ, ಯಾವುದೇ ರಾಜಕೀಯ ಘಟನೆಗೆ ಕಾರಣವಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.

► ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ

'ನಮ್ಮ ಪಕ್ಷವನ್ನು ಬೆಂಬಲಿಸಿದ್ದಕ್ಕಾಗಿ ದುಡಿದು ತಿನ್ನುವ ಶ್ರಮಜೀವಿಯೊಬ್ಬನ ಆಟೋವನ್ನು ಜಖಂ ಮಾಡುವ ಕಾಂಗ್ರೆಸ್ ನ ಕ್ರೂರ ಮನಸ್ಥಿತಿ, ಸರ್ಕಾರ ರಚನೆಯಾಗುವ ಮೊದಲೇ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತೀಯ ಶಕ್ತಿಗಳಿಗೆ ಮೊದಲ ದಿನದಿಂದಲೇ ಬೆಂಗಾವಲಾಗಿ ನಿಂತಿರುವುದು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಒಳ್ಳೆಯ ಸೂಚನೆಯಲ್ಲ' ಎಂದು ರಾಜ್ಯ ಬಿಜೆಪಿ @BJP4Karnataka ಸೋಮವಾರ ಟ್ವೀಟ್ ಮಾಡಿತ್ತು. 

share
Next Story
X