'ಅನ್ನಭಾಗ್ಯ' ಅಕ್ಕಿ 5 ಕೆಜಿಗೆ ಇಳಿಕೆ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಎಂ.ಪಿ.ರೇಣುಕಾಚಾರ್ಯ
''ಯಡಿಯೂರಪ್ಪರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು...''

''ಯಡಿಯೂರಪ್ಪರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು...''
ದಾವಣಗೆರೆ: ಬಿಜೆಪಿ ತಪ್ಪು ನಿರ್ಧಾರ, ಅನ್ನಭಾಗ್ಯ' ಅಕ್ಕಿ 5 ಕೆಜಿಗೆ ಇಳಿಕೆ ಮಾಡಿದ್ದೇ ರಾಜ್ಯದಲ್ಲಿ ಬಿಜೆಪಿಗೆ ಸೋಲಿಗೆ ಪ್ರಮುಖ ಕಾರಣ ಎಂದು ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಕಾಂಗ್ರೆಸ್ ನಲ್ಲಿ ದಲಿತ ಸಮುದಾಯಕ್ಕೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ಇದ್ದಾರೆ. ಬಿಜೆಪಿನಲ್ಲಿ ಇಂತಹ ಪ್ಲ್ಯಾನ್ ಮಾಡಲೇ ಇಲ್ಲ' ಎಂದು ಹೇಳಿದರು.
''ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಹೇಳುತ್ತಿದ್ದಾರೆ. ಯಡಿಯೂರಪ್ಪರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
Next Story