Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ತಿಂಗಳಲ್ಲಿ ದೈಹಿಕ ಕ್ಷಮತೆ ಪಡೆಯಿರಿ,...

3 ತಿಂಗಳಲ್ಲಿ ದೈಹಿಕ ಕ್ಷಮತೆ ಪಡೆಯಿರಿ, ಇಲ್ಲದಿದ್ದರೆ ನಿವೃತ್ತರಾಗಿ: ಅಸ್ಸಾಮ್ ಪೊಲೀಸರಿಗೆ ಡಿಜಿಪಿ ಎಚ್ಚರಿಕೆ

16 May 2023 10:14 PM IST
share
3 ತಿಂಗಳಲ್ಲಿ ದೈಹಿಕ ಕ್ಷಮತೆ ಪಡೆಯಿರಿ, ಇಲ್ಲದಿದ್ದರೆ ನಿವೃತ್ತರಾಗಿ: ಅಸ್ಸಾಮ್ ಪೊಲೀಸರಿಗೆ ಡಿಜಿಪಿ ಎಚ್ಚರಿಕೆ

ಗುವಾಹಟಿ, ಮೇ 16: ಪೊಲೀಸ್ ಪಡೆಯಲ್ಲಿರುವ ನಿಷ್ಕ್ರಿಯರನ್ನು ತೆಗೆದುಹಾಕುವುದಕ್ಕಾಗಿ, ಐಪಿಎಸ್ ಅಧಿಕಾರಿಗಳು ಸೇರಿದಂತೆ ತನ್ನೆಲ್ಲ ಸಿಬ್ಬಂದಿಯ ಎತ್ತರ-ತೂಕ ಪ್ರಮಾಣ (BMI)ವನ್ನು ವೃತ್ತಿಪರವಾಗಿ ದಾಖಲಿಸಿಡಲು ಅಸ್ಸಾಮ್ ಪೊಲೀಸ್ ಇಲಾಖೆಯು ನಿರ್ಧರಿಸಿದೆ. ದೈಹಿಕ ಕ್ಷಮತೆಯನ್ನು ಹೊಂದಲು ಪೊಲೀಸರಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗುವುದು ಹಾಗೂ ಆ ಬಳಿಕ ಬಿಎಮ್‌ಐಯನ್ನು ದಾಖಲಿಸಲಾಗುವುದು.

‘‘ಐಪಿಎಸ್ ಮತ್ತು ಎಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಸ್ಸಾಮ್ ಪೊಲೀಸ್ ಸಿಬ್ಬಂದಿಗೆ ದೈಹಿಕ ಕ್ಷಮತೆಯನ್ನು ಹೊಂದಲು ಮೂರು ತಿಂಗಳ, ಅಂದರೆ ಆಗಸ್ಟ್ 15ರವರೆಗೆ ಕಾಲಾವಕಾಶವನ್ನು ನೀಡಲು ನಾವು ನಿರ್ಧರಿಸಿದ್ದೇವೆ. ಬಳಿಕ, ಮುಂದಿನ 15 ದಿನಗಳಲ್ಲಿ ಬಿಎಮ್‌ಐ ದಾಖಲಾತಿಯನ್ನು ಆರಂಭಿಸಲಾಗುವುದು’’ ಎಂದು ಅಸ್ಸಾಮ್ ಪೊಲೀಸ್ ಮಹಾನಿರ್ದೇಶಕ (DGP) ಜಿ.ಪಿ. ಸಿಂಗ್ ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಬೊಜ್ಜು ಹೊಂದಿರುವ, ಅಂದರೆ 30ಕ್ಕಿಂತಲೂ ಅಧಿಕ ಬಿಎಮ್‌ಐ ಸಂಖ್ಯೆ ಹೊಂದಿರುವ ಎಲ್ಲರಿಗೂ ತೂಕ ಕಡಿಮೆ ಮಾಡಲು ಇನ್ನೂ ಮೂರು ತಿಂಗಳ ಸಮಯಾವಕಾಶ ನೀಡಲಾಗುವುದು ಹಾಗೂ ಆ ಬಳಿಕ ಅವರಿಗೆ ಸ್ವಯಂ ನಿವೃತ್ತಿ ಯೋಜನೆ (VRS) ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ ಎಂದು ಅವರು ಹೇಳಿದರು. ಹೈಪೊತೈರೋಯ್ಡಿಸಮ್ ಮುಂತಾದ ನೈಜ ವೈದ್ಯಕೀಯ ಕಾರಣಗಳನ್ನು ಹೊಂದಿರುವವರಿಗೆ ವಿನಾಯಿತಿ ನೀಡಲಾಗುವುದು ಎಂದು ಡಿಜಿಪಿ ಸಿಂಗ್ ಹೇಳಿದರು.

ಆಗಸ್ಟ್ 16ರಂದು ನಾನೇ ಮೊದಲಿಗನಾಗಿ ಬಿಎಮ್‌ಐಗೆ ಒಳಪಡುತ್ತೇನೆ ಎಂದು ಅವರು ತಿಳಿಸಿದರು.

ಅಸ್ಸಾಮ್ ಪೊಲೀಸ್ ಇಲಾಖೆಯಲ್ಲಿ ಸುಮಾರು 70,000 ಸಿಬ್ಬಂದಿಯಿದ್ದಾರೆ.

ಇತ್ತೀಚೆಗೆ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿದ್ದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, ಕುಡಿತದ ದಾಸರು, ಭಾರೀ ಬೊಜ್ಜು ಹೊಂದಿದವರು ಮತ್ತು ಭ್ರಷ್ಟಾಚಾರ ಆರೋಪಗಳನ್ನು ಎದುರಿಸುವವರನ್ನು ತೆಗೆದುಹಾಕಿ ಪೊಲೀಸ್ ಪಡೆಗೆ ಚೈತನ್ಯ ನೀಡಬೇಕು ಎಂದು ಕರೆ ನೀಡಿದ್ದರು.

share
Next Story
X