ಬಿ.ಕೆ. ಹರಿಪ್ರಸಾದ್‌ರಿಗೆ ಕ್ಯಾಬಿನೆಟ್ ದರ್ಜೆ ನೀಡುವಂತೆ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ

ಮಂಗಳೂರು : ಬಿ.ಕೆ. ಹರಿಪ್ರಸಾದ್ ಅವರಿಗೆ ಕ್ಯಾಬಿನೆಟ್ ದರ್ಜೆ ನೀಡುವಂತೆ ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದೆ.
ಕೋಮು ಧ್ರುವೀಕರಣದಿಂದ ತತ್ತರಿಸಿರುವ ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಮರುಕಳಿಸಲು, ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಇರುವ ಏಕೈಕ ಆಯ್ಕೆ ಬಿ.ಕೆ. ಹರಿಪ್ರಸಾದ್. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕ್ಯಾಬಿನೆಟ್ ದರ್ಜೆ ನೀಡಿದರೆ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಮತ್ತು 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಬೇಕೆಂದು ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸುತ್ತದೆ ಎಂದು ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಅವರು ತಿಳಿಸಿದ್ದಾರೆ.
Next Story





