ಸಮ್ಮಿಶ್ರ ಸರಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ?: ಮಾಜಿ ಸಚಿವ ಸುಧಾಕರ್

ಬೆಂಗಳೂರು: 2018ರಲ್ಲಿ ರಚನೆಯಾಗಿದ್ದ ಕಾಂಗ್ರೆಸ್ ಜೆಡಿಎಸ್-ಮೈತ್ರಿ ಸರಕಾರದಿಂದ ಹೊರಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಮಾಜಿ ಆರೋಗ್ಯ ಸಚಿವ ಡಾ. ಸುಧಾಕರ್ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ''2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು'' ಎಂದು ತಿಳಿಸಿದ್ದಾರೆ.
''2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು'' ಎಂದು ಹೇಳಿದ್ದಾರೆ.
''ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?'' ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.
During the JDS-Cong coalition govt in 2018, whenever MLAs went to the then Coordination Committe Chairman Shri Siddaramaiah with their concerns, he used to express his helplessness and say that he has no say in the govt and his constituency/district works itself are stalled.
— Dr Sudhakar K (@mla_sudhakar) May 17, 2023
1/3
Further, Shri Siddaramaiah used to assure MLAs to wait till 2019 Lok Sabha polls and come what may he won't allow Shri HD Kumaraswamy led coalition govt to continue even for a single day after Lok Sabha polls.
— Dr Sudhakar K (@mla_sudhakar) May 17, 2023
2/3