ಡಿಕೆಶಿ- ಸಿದ್ದರಾಮಯ್ಯ ಮಧ್ಯೆ ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ: ಸತೀಶ್ ಜಾರಕಿಹೊಳಿ
''ಜನರಿಗೆ, ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ''

''ಜನರಿಗೆ, ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ''
ಬೆಂಗಳೂರು: 'ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮಧ್ಯೆ ಸಮಾಧಾನಕರ ರೀತಿಯಲ್ಲೇ ಯಶಸ್ವಿ ಸಂಧಾನ ಆಗಿದೆ, ಇದೊಂದು ಒಳ್ಳೆಯ ಬೆಳವಣಿಗೆ' ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಸ್ಥಾನಕ್ಕೆ ಯಾರೇ ಆಕಾಂಕ್ಷಿಗಳಿದ್ದರೂ, ಅಂತಿಮವಾಗಿ ಒಬ್ಬರೇ ಆಗಬೇಕು. ಸಿದ್ದರಾಮಯ್ಯಗೆ ಅನುಭವ ಇದೆ. ಕಳೆದ ಬಾರಿಯಂತೆ ಸರಾಗವಾಗಿ ಆಡಳಿತ ನಡೆಯಲಿದೆ. ಇದರಿಂದ ಜನರಿಗೆ, ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ' ಎಂದು ತಿಳಿಸಿದರು.
'ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಇರಬಹುದು, ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಒಟ್ಟಾಗಿ ಲೋಕಸಭೆ ಚುನಾವಣೆಗೆ ಹೋಗುತ್ತೇವೆ' ಎಂದು ಹೇಳಿದರು.
Next Story