ಡಿ.ಕೆ ಸುರೇಶ್ ನಿವಾಸದಲ್ಲಿ ಶಾಸಕರ ಜತೆ ಡಿ.ಕೆ ಶಿವಕುಮಾರ್ ಸಮಾಲೋಚನೆ

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ.
ಶಾಸಕರಾದ ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ ಶಿವಕುಮಾರ್ ಸಮಾಲೋಚನೆ ನಡೆಸುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಹಿನ್ನೆಲೆ ಹೈಕಮಾಂಡ್ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
Next Story





.jpeg)

