ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಹುಟ್ಟಿಸಿದೆ. ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕಾಡಾನೆ ಪ್ರತ್ಯಕ್ಷಗೊಂಡಿದೆ. ರಸ್ತೆಯ ಬದಿಯಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದಾರೆ.
ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದವು.
ಆಗಾಗ ಇಲ್ಲಿ ಕಾಡಾನೆ ಕಾಣಿಸಿಕೊಳ್ಳುತ್ತಿದ್ದು ಹಲವು ಬಾರಿ ಅರಣ್ಯ ಇಲಾಖೆಯವರು ಆನೆಯನ್ನು ಓಡಿಸುವ ಕಾರ್ಯ ಮಾಡಿದ್ದಾರೆ. ಘಾಟಿಯಲ್ಲಿ ರಾತ್ರಿ ವೇಳೆ ಸಂಚರಿಸುವವರು ಮುಂಜಾಗ್ರತೆ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ
Next Story