Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ...

ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು: ಪ್ರಸನ್ನ ಎಚ್

17 May 2023 3:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು: ಪ್ರಸನ್ನ ಎಚ್

ಉಡುಪಿ, ಮೇ 17: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿ‌ಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಎಚ್ ತಿಳಿಸಿದ್ದಾರೆ. 

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ  ಇಂದು ನಡೆದ 2023ನೇ ಸಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಸಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆಗಳ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು.  

ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗುವುದು ಎಂದರು.

ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ತುಂಬು ತೋಳಿನ ಶರ್ಟ್ ಹಾಗೂ ಆಭರಣ ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗಳು ಆರಂಭಗೊಳ್ಳುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆಗೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್‌ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್‌ಕಾರ್ಡ್) ತರುವಂತೆ ತಿಳಿಸಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಪ್ರಭಾರ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ  ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮೇ 23ರಿಂದ ಜೂನ್ 3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X