ಬಹುಮತವಿದ್ದರೂ ಕಾಂಗ್ರೆಸ್ ಸರಕಾರ ರಚನೆ ಮಾಡುತ್ತಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 17: ಕಾಂಗ್ರೆಸ್‍ನವರು ಲಿಂಗಾಯತರ ಬಗ್ಗೆ ಬಹಳ ಮಾತನಾಡಿದ್ದಾರೆ. ಇದೀಗ ಲಿಂಗಾಯತ ಸಮುದಾಯದ ನಾಯಕರಿಗೆ ಯಾವ ಸ್ಥಾನ ಕೊಡುತ್ತಾರೆ ನೋಡೊಣ’ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಆ ಪಕ್ಷ ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ’ ಎಂದು ಸಲಹೆ ನೀಡಿದರು.
‘ಪೂರ್ಣ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಮಾಡದೇ ಇರುವುದು ಪಕ್ಷದಲ್ಲಿನ ಹೊಂದಾಣಿಕೆ ಸರಿ ಇಲ್ಲ ಎನ್ನುದುನ್ನು ತೋರಿಸುತ್ತದೆ. ಅದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ತಮ್ಮ ರಾಜಕೀಯ ಬಿಟ್ಟು ಆದಷ್ಟು ಬೇಗ ಮುಖ್ಯಮಂತ್ರಿ ಆಯ್ಕೆ ಮಾಡಿ, ಸರಕಾರ ರಚಿಸಿ ಜನರ ಸೇವೆ ಮಾಡಲಿ ಎಂದು ಹೇಳಿದರು.
Next Story