Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆಯ...

ಅಫ್ಘಾನ್ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆಯ ಸಮಸ್ಯೆ: ವರದಿ ಹೆಚ್ಚುತ್ತಿರುವ ಆಹಾರ ಅಭದ್ರತೆ

17 May 2023 10:04 PM IST
share
ಅಫ್ಘಾನ್ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆಯ ಸಮಸ್ಯೆ: ವರದಿ ಹೆಚ್ಚುತ್ತಿರುವ ಆಹಾರ ಅಭದ್ರತೆ

ಕಾಬೂಲ್, ಮೇ 17:  ವಿಶ್ವದ ಅತ್ಯಂತ ಘೋರ ಮಾನವೀಯ ವಿಪತ್ತಿಗೆ ಸಾಕ್ಷಿಯಾಗಿರುವ ಅಫ್ಘಾನಿಸ್ತಾನದಲ್ಲಿ ಆಹಾರ ಅಭದ್ರತೆಯ ಸಮಸ್ಯೆ ಬಿಗಡಾಯಿಸಿದ್ದು ದೇಶದ ಜನಸಂಖ್ಯೆಯ ಮೂರನೇ ಎರಡರಷ್ಟು ಜನರಿಗೆ ಆಹಾರದ ಕೊರತೆ ಎದುರಾಗಿದೆ ಎಂದು ಮಾನವ ಹಕ್ಕುಗಳ ನಿಗಾ ಸಂಸ್ಥೆಯ ಇತ್ತೀಚಿನ ವರದಿ ಹೇಳಿದೆ.

ಅಫ್ಘಾನಿಸ್ತಾನವು ಮಾಧ್ಯಮದಿಂದ ಕಣ್ಮರೆಯಾಗಿದ್ದರೂ, ವಿಶ್ವದ ಅತ್ಯಂತ ಘೋರ ಮಾನವೀಯ ವಿಪತ್ತುಗಳಲ್ಲಿ ಒಂದಾಗಿದೆ. ಎನ್‍ಜಿಒಗಳಲ್ಲಿ ಮಹಿಳೆಯರು ಕೆಲಸ ಮಾಡುವುದನ್ನು ನಿಷೇಧಿಸಿದ ಬಳಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. 8,75,000 ಮಕ್ಕಳು ತೀವ್ರ ಅಪೌಷ್ಟಿಕತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಹಿಳೆಯರು ಮತ್ತು ಹುಡುಗಿಯರು ಹೆಚ್ಚಿನ ಅಪಾಯದಲ್ಲಿದ್ದಾರೆ ಎಂದು ಮಾನವಹಕ್ಕುಗಳ ನಿಗಾ ಸಮಿತಿಯನ್ನು ಉಲ್ಲೇಖಿಸಿ ಟೋಲೋ ನ್ಯೂಸ್ ವರದಿ ಮಾಡಿದೆ.

ಮಾನವೀಯ ನೆರವು ಒದಗಿಸುವಲ್ಲಿ ಆಗಿರುವ ಅಡ್ಡಿಯು  ಹಲವು ಅಫ್ಘನ್ನರನ್ನು ಬಡತನ ಮತ್ತು ಹಸಿವಿನ ಸಮಸ್ಯೆಗೆ ದೂಡಲಿದೆ. ಅಫ್ಘಾನ್‍ನಲ್ಲಿ ಮಾನವೀಯ ಪರಿಸ್ಥಿತಿ ಅತ್ಯಂತ ಗಂಭೀರವಾಗಿ ಉಳಿದಿದೆ ಮತ್ತು ನಮ್ಮ ಕಾರ್ಯಾಚರಣೆಗೆ ಆರ್ಥಿಕ ನಿಧಿಯ ಕೊರತೆ ಎದುರಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡ್ಯುಜೆರಿಕ್ ಹೇಳಿದ್ದಾರೆ.

ದುರಂತ ಮಟ್ಟದ ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿರುವ 7 ದೇಶಗಳಲ್ಲಿ ಅಫ್ಘಾನಿಸ್ತಾನವೂ ಒಂದಾಗಿದೆ ಎಂದು ಇದಕ್ಕೂ ಮುನ್ನ ಬಿಡುಗಡೆಗೊಂಡಿರುವ ವಿಶ್ವಬ್ಯಾಂಕ್‍ನ ವರದಿ ಹೇಳಿದೆ. ಅಫ್ಘಾನಿಸ್ತಾನ, ಬುರ್ಕಿನಾ ಫಾಸೊ, ಹೈಟಿ, ನೈಜೀರಿಯಾ, ಸೊಮಾಲಿಯಾ, ದಕ್ಷಿಣ ಸುಡಾನ್ ಮತ್ತು ಯೆಮೆನ್ ಈ 7 ದೇಶಗಳಲ್ಲಿ 2017ರ ಬಳಿಕದ ಅತ್ಯಧಿಕ ಆಹಾರ ಬಿಕ್ಕಟ್ಟು ತಲೆದೋರಿದೆ ಎಂದು ವರದಿ ಹೇಳಿದೆ. ಈ ಮಧ್ಯೆ, ದೇಶದಲ್ಲಿ ವ್ಯಾಪಕವಾದ ಮಾನವೀಯ ಬಿಕ್ಕಟ್ಟಿನ ಮಧ್ಯೆ ಹಣಕಾಸಿನ ಕೊರತೆಯಿಂದಾಗಿ ಅಫ್ಘಾನಿಸ್ತಾನದಲ್ಲಿ ನಿರ್ಣಾಯಕ ಆಹಾರ ನೆರವಿನ ಕೊರತೆ ಎದುರಾಗಿದೆ ಎಂದು ಯುನಿಸೆಫ್ ಎಚ್ಚರಿಸಿದೆ.

ಅಫ್ಘಾನಿಸ್ತಾನದಲ್ಲಿ ತೀವ್ರವಾದ ಅಪೌಷ್ಟಿಕತೆಯ ಕಾರಣದಿಂದಾಗಿ ಈ ವರ್ಷದಲ್ಲಿಯೇ  ಸಾವಿರಾರು ದುರ್ಬಲ ಮಕ್ಕಳು ಸಾಯಬಹುದು ಎಂದು ವಿಶ್ವಸಂಸ್ಥೆ ಮಕ್ಕಳ ನಿಧಿ(ಯುನಿಸೆಫ್)ಯ ಅಧಿಕಾರಿ ಮೆಲಾನಿ ಗಾಲ್ವಿನ್ ಹೇಳಿದ್ದಾರೆ. ಅಪೌಷ್ಟಿಕತೆ ನಿವಾರಿಸಲು ಮತ್ತು ದೇಶದಾದ್ಯಂತ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲು ಯುನಿಸೆಫ್‍ಗೆ 21 ದಶಲಕ್ಷ ಡಾಲರ್ ನಿಧಿಯ ತುರ್ತು ಅಗತ್ಯವಿದೆ. ಅಲ್ಲದೆ ಬಳಕೆಗೆ ಸಿದ್ಧವಾದ ಚಿಕಿತ್ಸಕ ಆಹಾರ(ಆರ್‍ಯುಟಿಎಫ್)ದ ಕೊರತೆಯಿದೆ ಎಂದವರು ಹೇಳಿದ್ದಾರೆ. ಅಪೌಷ್ಟಿಕತೆಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಗುಣಪಡಿಸಲು ಅಗತ್ಯವಾದ ಸಿದ್ಧ ಆಹಾರವೆಂದು ಆರ್‍ಯುಟಿಎಫ್ ಅನ್ನು ಪರಿಗಣಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ 15 ದಶಲಕ್ಷಕ್ಕೂ ಹೆಚ್ಚಿನ ಮಕ್ಕಳು ಸೇರಿದಂತೆ 28 ದಶಲಕ್ಷಕ್ಕೂ ಅಧಿಕ ಜನರಿಗೆ ಮಾನವೀಯ ನೆರವು ಮತ್ತು ಭದ್ರತೆಯ ಅಗತ್ಯವಿದೆ. 2022ಕ್ಕೆ ಹೋಲಿಸಿದರೆ ಈ ಪ್ರಮಾಣ 4 ದಶಲಕ್ಷದಷ್ಟು ಅಧಿಕವಾಗಿದೆ ಎಂದು ಯುನಿಸೆಫ್‍ನ ವರದಿ ಹೇಳಿದೆ.

share
Next Story
X