‘ಸಿದ್ದರಾಮಯ್ಯ ಮುಖ್ಯಮಂತ್ರಿ’ ಎಂದವರಿಗೆ ನೋಟಿಸ್ ನೀಡಲು ಸುರ್ಜೆವಾಲಾ ಸೂಚನೆ

ಬೆಂಗಳೂರು, ಮೇ 17: ಎಐಸಿಸಿ ಅಧಿಕೃತವಾಗಿ ಮುಖ್ಯಮಂತ್ರಿಯ ಹೆಸರು ಘೋಷಣೆ ಮಾಡುವ ಮುನ್ನವೆ ‘ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆಯಾಗಿದೆ’ ಎಂದು ಹೇಳಿಕೆ ನೀಡಿರುವ ಶಾಸಕ ಅಶೋಕ್ ಪಟ್ಟಣ್ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರಿಗೆ ಪುಷ್ಪಾ ಅಮರನಾಥ್ ಹಾಗೂ ಶಾಸಕ ಅಶೋಕ್ ಪಟ್ಟಣ್‍ಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
Next Story





