ಮುಖ್ಯಮಂತ್ರಿ ಆಯ್ಕೆ | ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ: ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರನ್ನ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಏಕೈಕ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, 'ಹೈಕಮಾಂಡ್ ನ ಯಾವುದೇ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ, ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ' ಎಂದು ಸ್ಪಷ್ಟಪಡಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ರನ್ನು ಉಪಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ. ಇಲ್ಲಿ ಉಭಯ ನಾಯಕರು ಮುಖಾಮುಖಿಯಾಗಲಿದ್ದಾರೆ.
Next Story