ಉಡುಪಿಯಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ

ಉಡುಪಿ: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬವನ್ನು ಉಡುಪಿ ಜಿಲ್ಲಾ ಜೆಡಿಎಸ್ ವತಿ ಯಿಂದ ಗುರುವಾರ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಯೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಪರ್ಕಳ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಬಿ.ಶೆಟ್ಟಿ ಕೆಂಚನೂರ್, ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫೈಝನ್ ಅಹ್ಮದ್, ಮುಖಂಡರಾದ ರಾಮರಾವ್, ವಿಶಾಲಾಕ್ಷಿ, ರಂಗ ಕೋಟ್ಯಾನ್, ರಶೀದ್ ಯು.ಎ., ನವೀನ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story