ಕಂಬಳಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ: ಸಮಿತಿ ಸ್ವಾಗತ

ಮಂಗಳೂರು, ಮೇ 18: ಕರಾವಳಿಯ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿಯು ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿರುವುದು ಸ್ವಾಗತಾರ್ಹ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾ.ಬೃಜೇಶ್ ಚೌಟ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಂಬಳದ ನಿಷೇಧದ ಬಗೆಗೆ ಪ್ರಾಣಿ ದಯಾ ಸಂಘಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಈ ಹಿಂದೆ ರಾಜ್ಯ ಸರಕಾರ ಪ್ರಾಣಿ ಹಿಂಸಾ ಕಾಯ್ದೆಗೆ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಿಂದ ಕಂಬಳವನ್ನು ಸುಸೂತ್ರವಾಗಿ ನಡೆಸಲು ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.
Next Story