ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಲಾಯಿತು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಶಾಸಕರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ದೇಶಪಾಂಡೆ, ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ತನ್ವೀರ್ ಸೇಠ್, ಎಚ್.ಕೆ.ಮುನಿಯಪ್ಪ ಮತ್ತಿತರರು ಅನುಮೋದಿಸಿದರು.
ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಬಿ ಕೆ ಹರಿಪ್ರಸಾದ್, ಶಾಸಕರು, ಸಂಸದರು ಸೇರಿ ಹಲವರು ಭಾಗಿಯಾಗಿದ್ದಾರೆ.







.jpeg)


